ವಿಕೆಟ್ ಪಡೆದ ಸಂಭ್ರಮದಲ್ಲಿ ಟ್ರೆಂಟ್ ಬೌಲ್ಟ್
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ನಲ್ಲಿ ಕಿವೀಸ್ ನೀಡಿರುವ 240 ರನ್ ಗಳ ಗುರಿ ಬೆನ್ನು ಹತ್ತಿರುವ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿದ್ದು, ಕೇವಲ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.
ನ್ಯೂಜಿಲೆಂಡ್ ತಂಡ ನೀಡಿದ 240 ರನ್ ಗಳ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡ ಆರಂಭದಲ್ಲಿ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಂಡಿತು. ಮ್ಯಾಟ್ ಹೆನ್ರಿ ಎಸೆದ 2ನೇ ಓವರ್ ನ 3ನೇ ಎಸೆತದಲ್ಲಿಯೇ 1 ರನ್ ಗಳಿಸಿದ್ದ ರೋಹಿತ್ ಶರ್ಮಾ ಲಾಥಮ್ ಕ್ಯಾಚ್ ನೀಡಿ ಹೊರ ನಡೆದರು. ಬಳಿಕ ಬಂದ ನಾಯಕ ವಿರಾಟ್ ಕೊಹ್ಲಿ ಕೂಡ ಮರು ಓವರ್ ನಲ್ಲಿಯೇ ಟ್ರೆಂಟ್ ಬೌಲ್ಟ್ ಓವರ್ ನಲ್ಲಿ 1 ರನ್ ಗಳಿಸಿ ಎಲ್ ಬಿ ಬಲೆಗೆ ಬಿದ್ದರು. ನಂತರದ ಓವರ್ ನಲ್ಲಿ ಮತ್ತೋರ್ವ ಆರಂಭಿಕ ಆಟಗಾರ ಕೆಎಲ್ ರಾಹುಲ್ ಕೂಡ ಮ್ಯಾಟ್ ಹೆನ್ರಿ ಬೌಲಿಂಗ್ ನಲ್ಲಿ ಲಾಥಮ್ ಕ್ಯಾಚ್ ನೀಡಿ ಔಟಾಗಿದ್ದು, ತಂಡದ ಪ್ರಮುಖ ಬ್ಯಾಟ್ಸ್ ಮನ್ ಗಳನ್ನು ಕಳೆದುಕೊಂಡು ಭಾರತ ತಂಡ ತೀವ್ರ ಸಂಕಷ್ಟಕ್ಕೀಡಾಗಿದೆ.
ಪ್ರಸ್ತುತ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ರಿಷಬ್ ಪಂತ್ ಮತ್ತು ದಿನೇಶ್ ಕಾರ್ತಿಕ್ ಕ್ರೀಸ್ ನಲ್ಲಿದ್ದಾರೆ. ನ್ಯೂಜಿಲೆಂಡ್ ಪರ ಮ್ಯಾಟ್ ಹೆನ್ರಿ 2 ವಿಕೆಟ್ ಪಡೆದಿದ್ದು, ಬೌಲ್ಟ್ 1 ವಿಕೆಟ್ ಪಡೆದು ಮಿಂಚಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಭಾರತ ತಂಡ 5 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 6 ರನ್ ಗಳಿಸಿದೆ. ಈ ಪಂದ್ಯವನ್ನು ಗೆಲ್ಲಲು ಭಾರತ ಬಾಕಿ ಉಳಿದಿರುವ 45 ಓವರ್ ನಲ್ಲಿ 234 ರನ್ ಗಳಿಸಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics