ಸಂಗ್ರಹ ಚಿತ್ರ 
ಕ್ರಿಕೆಟ್

ಟೀಂ ಇಂಡಿಯಾ ಸಲಹಾ ಸಮಿತಿ ಮುಖ್ಯಸ್ಥರಾಗಿ ಕಪಿಲ್ ದೇವ್ ನೇಮಕ..?, ಕೋಚ್ ರವಿಶಾಸ್ತ್ರಿಗೆ ಕೊಕ್?

ಐಸಿಸಿ ವಿಶ್ವಕಪ್ ಸೋಲಿನ ಬೆನ್ನಲ್ಲೇ ಭಾರತ ತಂಡದಲ್ಲಿ ಮಹತ್ತರ ಬದಲಾವಣೆ ಮಾಡುವ ಸಾಧ್ಯತೆ ಇದ್ದು, ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆಗಾಗಿ ತಂಡದ ಸಲಹಾ ಸಮಿತಿಗೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ನವದೆಹಲಿ: ಐಸಿಸಿ ವಿಶ್ವಕಪ್ ಸೋಲಿನ ಬೆನ್ನಲ್ಲೇ ಭಾರತ ತಂಡದಲ್ಲಿ ಮಹತ್ತರ ಬದಲಾವಣೆ ಮಾಡುವ ಸಾಧ್ಯತೆ ಇದ್ದು, ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆಗಾಗಿ ತಂಡದ ಸಲಹಾ ಸಮಿತಿಗೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಬಗ್ಗೆ ಕ್ರಿಕೆಟ್ ವೆಬೈ ಸೈಟ್ ವೊಂದು ವರದಿ ಮಾಡಿದ್ದು, ಹಾಲಿ ಟೀಂ ಇಂಡಿಯಾದ ಸಲಹಾ ಸಮಿತಿಗೆ ಭಾರತದ ಲೆಜೆಂಡ್ ಮಾಜಿ ಆಟಗಾರ ಕಪಿಲ್ ದೇವ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ. ಪ್ರಸ್ತುತ ಈ ಸಲಹಾ ಸಮಿತಿಯಲ್ಲಿ, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಸದಸ್ಯರಾಗಿದ್ದು, ಈ ಸಮಿತಿ ಕಪಿಲ್ ದೇವ್ ಅವರನ್ನು ಮುಖ್ಯಸ್ಥರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.
ಇದೇ ಸಲಹಾ ಸಮಿತಿಯಿಂದಲೇ ನೂತನ ಟೀಂ ಇಂಡಿಯಾ ಕೋಚ್ ಆಯ್ಕೆ ನಡೆಯಲಿದೆ ಎಂದು ಹೇಳಲಾಗಿದೆ.
ಕೋಚ್ ರವಿಶಾಸ್ತ್ರಿಗೆ ಕೊಕ್?
ಇನ್ನು ಹಾಲಿ ಕೋಚ್ ರವಿಶಾಸ್ತ್ರಿ ಅವರ ಸ್ಥಾನದ ಕುರಿತೂ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದು, ಕೋಚ್ ರವಿಶಾಸ್ತ್ರಿ ಅವರನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸಿ ಬೇರೆ ನೂತನ ಕೋಚ್ ಅನ್ನು ಟೀಂ ಇಂಡಿಯಾಗೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಸ್ತುತ ರವಿಶಾಸ್ತ್ರಿ ಮತ್ತು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತಯಾರಿ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್