ಆಯ್ಕೆದಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ 
ಕ್ರಿಕೆಟ್

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಏಕದಿನ, ಟಿ-20ಯಿಂದ ಬೂಮ್ರಾಗೆ ವಿಶ್ರಾಂತಿ

ಆಗಸ್ಟ್ 3ರಿಂದ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಎರಡು ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ-20 ಪಂದ್ಯಗಳಿಗಾಗಿ ಭಾರತೀಯ ತಂಡವನ್ನು ಇಂದು ಪ್ರಕಟಿಸಲಾಗಿದೆ.

ನವದೆಹಲಿ: ಆಗಸ್ಟ್ 3ರಿಂದ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಎರಡು ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ-20 ಪಂದ್ಯಗಳಿಗಾಗಿ  ಭಾರತೀಯ ತಂಡವನ್ನು ಇಂದು ಪ್ರಕಟಿಸಲಾಗಿದೆ.
ವಿರಾಟ್ ಕೊಹ್ಲಿ ಈ  ತಂಡವನ್ನು ಮುನ್ನಡೆಸಲಿದ್ದು, ಧೋನಿ ರಜೆಯಲ್ಲಿರುವ ಕಾರಣ  ರಿಷಭ್ ಪಂತ್ ಅವರಿಗೆ ವಿಕೆಟ್ ಕೀಪರ್  ಸ್ಥಾನ ನೀಡಲಾಗಿದೆ. 
ವೇಗಿ ಜಸ್ಪ್ರೀತ್ ಬೂಮ್ರಾಗೆ  ಏಕದಿನ ಹಾಗೂ ಟಿ-20 ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಸಭೆಯ ಬಳಿಕ ಆಯ್ಕೆದಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್  ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಟೆಸ್ಟ್ ಪಂದ್ಯಗಳಿಗೆ ಭಾರತದ ತಂಡ ಹೀಗಿದೆ: ವಿರಾಟ್ ಕೊಹ್ಲಿ ( ನಾಯಕ) ರಹಾನೆ ( ಉಪನಾಯಕ) ಮಾಯಾಂಕ್ ಅಗರ್ ವಾಲ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಬ್ ಪಂತ್ ( ವಿಕೆಟ್ ಕೀಪರ್ ) ವೃದ್ದಿಮನ್ ಸಹಾ ( ವಿಕೆಟ್ ಕೀಪರ್ ) ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪೀತ್ ಬೂಮ್ರಾ, ಉಮೇಶ್ ಯಾದವ್
ಏಕದಿನ ಪಂದ್ಯಕ್ಕಾಗಿ ಭಾರತದ ತಂಡ ಇಂತಿದೆ: ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಕೇದಾರ್ ಜಾದವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ , ನವದೀಪ್ ಸೈನಿ
ಟಿ-20 ಪಂದ್ಯಗಳಿಗೆ ಟೀಂ ಇಂಡಿಯಾ ಇಂತಿದೆ: ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಕೃನಾಲ್ ಪಾಂಡೆ, ಜಡೇಜಾ,  ವಾಷಿಂಗ್ಟನ್ ಸುಂದರ್,  ರಾಹುಲ್ ಚಾಹರ್,  ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಾಹರ್, ನವದೀಪ್ ಸೈನಿ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT