ಕ್ರಿಕೆಟ್

ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ; ಸೆಹ್ವಾಗ್ ಟು ಜಯವರ್ಧನೆ, ಪಟ್ಟಿಯಲ್ಲಿದ್ದಾರೆ ಅಗ್ರಗಣ್ಯರು!

Srinivasamurthy VN
ನವದೆಹಲಿ: ಐಸಿಸಿ ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಸರತ್ತು ಬಿರುಸಿನಿಂದ ಸಾಗುತ್ತಿದ್ದು, ಬಿಸಿಸಿಐನ ಅಧಿಕೃತ ಆಹ್ವಾನದ ಬೆನ್ನಲ್ಲೇ ಕ್ರಿಕೆಟ್ ಲೋಕದ ಅಗ್ರಗಣ್ಯ ಮಾಜಿ ಕ್ರಿಕೆಟಿಗರು ಪ್ರಧಾನ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ತುದಿಗಾಲಲ್ಲಿ ನಿಂತಿದ್ದಾರೆ.
ಹೌದು.. ಹಾಲಿ ಪ್ರಧಾನ ಕೋಚ್‌ ಹುದ್ದೆಗೆ ಜಯವರ್ಧನೆ ಅರ್ಜಿ ಹಾಲಿ ಕೋಚ್‌ ರವಿ ಶಾಸ್ತ್ರಿ ಮತ್ತು ತರಬೇತಿ ಬಳಗದ ಜೊತೆಗಿನ ಒಪ್ಪಂದ ವಿಶ್ವ ಕಪ್‌ ಟೂರ್ನಿಯೊಂದಿಗೆ ಅಂತ್ಯಗೊಂಡಿದೆ. ಆದರೆ, ಭಾರತ ತಂಡ ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರವಿ ಶಾಸ್ತ್ರಿ ಮತ್ತು ಅವರ ಬಳಗದ ಜೊತೆಗಿನ ಒಪ್ಪಂದವನ್ನು ಬಿಸಿಸಿಐ 45 ದಿನಗಳಿಗೆ ವಿಸ್ತರಿಸಿದೆ. 
ಈ ಸರಣಿ ಬಳಿಕ ಟೀಮ್‌ ಇಂಡಿಯಾದ ನೂತನ ಕೋಚ್‌ ನೇಮಕದ ಕಾರ್ಯ ಚುರುಕು ಪಡೆಯಲಿದೆ. ಈಗಾಗಲೇ ಹಲವು ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟಿಗರು ಭಾರತ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಬಿಸಿಸಿಐ ಮೂಲಗಳ ಪ್ರಕಾರ 2011ರಲ್ಲಿ ಟೀಂ ಇಂಡಿಯಾ ವಿಶ್ವಕಪ್ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದ ಅಂದಿನ ಕೋಚ್ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ಲೆಜೆಂಡ್ ಆಟಗಾರ ಗ್ಯಾರಿ ಕರ್ಸ್ಟರ್ನ್, ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ, ಆಸ್ಟ್ರೇಲಿಯಾದ ಲೆಜೆಂಡ್ ಆಟಗಾರ ಟಾಮ್ ಮೂಡಿ, ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವಿರೇಂದ್ರ ಸೆಹ್ವಾಗ್ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದಲ್ಲದೆ ಹಾಲಿ ಕೋಚ್ ರವಿ ಶಾಸ್ತ್ರಿ ಮತ್ತು ಬಳಗವೂ ಕೂಡ ಮರಳಿ ಕೋಚ್‌ ಹುದ್ದೆಗೆ ನೇರವಾಗಿ ಸ್ಪರ್ಧಿಸಲು ಬಿಸಿಸಿಐ ಅವಕಾಶ ಮಾಡಿಕೊಟ್ಟಿದೆ. 1983ರ ವಿಶ್ವಕಪ್‌ ವಿನ್ನರ್‌ ಭಾರತ ತಂಡದ ಮಾಜಿ ನಾಯಕ ಕಪಿಲ್‌ ದೇವ್‌ ಅವರ ಮುಂದಾಳತ್ವದ ಕ್ರಿಕೆಟ್‌ ಸಲಹಾ ಸಮಿತಿಯು ನೂತನ ಕೋಚ್‌ ನೇಮಕ ಪ್ರಕ್ರಿಯೆ ನಡೆಸಿಕೊಡಲಿದೆ. ಆ ಸಲಹಾ ಸಮಿತಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ದಾದಾ ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಸದಸ್ಯರಾಗಿದ್ದಾರೆ.
SCROLL FOR NEXT