ಪ್ರವೀಣ್ ಅಮ್ರೆ 
ಕ್ರಿಕೆಟ್

ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಹುದ್ದೆಗೆ ಪ್ರವೀಣ್ ಅಮ್ರೆ ಅರ್ಜಿ

ಟೀಂ ಇಂಡಿಯಾ ಮಾಜಿ ಬ್ಯಾಟ್ಸ್ ಮನ್ ಹಾಗೂ ಹಾಲಿ ದೆಹಲಿ ಕ್ಯಾಪಿಟಲ್ಸ್ ಟ್ಯಾಲೆಂಟ್ ಸ್ಕೌಟ್ ಪ್ರವೀಣ್ ಅಮ್ರೆ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಹುದ್ದೆಯ ರೇಸ್ ನಲ್ಲಿದ್ದಾರೆ.

ನವದೆಹಲಿ: ಟೀಂ ಇಂಡಿಯಾ ಮಾಜಿ ಬ್ಯಾಟ್ಸ್ ಮನ್  ಹಾಗೂ ಹಾಲಿ ದೆಹಲಿ  ಕ್ಯಾಪಿಟಲ್ಸ್  ಟ್ಯಾಲೆಂಟ್ ಸ್ಕೌಟ್ ಪ್ರವೀಣ್ ಅಮ್ರೆ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಹುದ್ದೆಯ ರೇಸ್ ನಲ್ಲಿದ್ದಾರೆ.
ಅಮ್ರೆ ಭಾರತ ಪರ 11 ಟೆಸ್ಟ್ ಪಂದ್ಯಗಳನ್ನಾಡಿದ್ದು, ಒಂದು ಶತಕ ಹಾಗೂ ಮೂರು ಅರ್ಧಶತಕೊಂದಿಗೆ 425 ರನ್ ಗಳಿಸಿದ್ದಾರೆ. 37 ಏಕದಿನ ಪಂದ್ಯಗಳಲ್ಲಿ ಎರಡು ಅರ್ಧಶತಕದೊದಿಗೆ 513 ರನ್  ಸಂಗ್ರಹಿಸಿದ್ದಾರೆ.
ಅಮ್ರೆ ದಿವಂಗತ ರಾಮಕಾಂತ್ ಅಚ್ರೆಕರ್ ಅವರ ವಿದ್ಯಾರ್ಥಿಯಾಗಿದ್ದು, ರಣಜಿ ಪಂದ್ಯ ಗೆದಿದ್ದ ಮುಂಬೈ ತಂಡದ ಕೋಚ್ ಆಗಿ ಕೆಲಸ ನಿರ್ವಹಿಸಿದ್ದಾರೆ ಪ್ರಸ್ತುತ ಅವರು ಅಮೆರಿಕಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಟೀಂ ಇಂಡಿಯಾದ ಮುಖ್ಯ ಕೋಚ್, ಬ್ಯಾಟಿಂಗ್ ಹಾಗೂ ಬೌಲಿಂಗ್ ಕೋಚ್ ಸೇರಿದಂತೆ ಪ್ರಮುಖ ಸ್ಥಾನಗಳಿಗಾಗಿ ಬಿಸಿಸಿಐ ಅರ್ಜಿಗಳನ್ನು ಆಹ್ವಾನಿಸಿದ್ದು, ನಾಳೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹಾಲಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರ ಗುತ್ತಿಗೆ ಅವಧಿಯನ್ನು ವೆಸ್ಟ್ ಇಂಡೀಸ್ ಸರಣಿಯವರೆಗೂ ವಿಸ್ತರಿಸಲಾಗಿದೆ. ಆದರೆ, ನಂತರ ಆ ಸ್ಥಾನಕ್ಕೂ ಹೊಸಬರ ಹುಡುಕಾಟ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT