ರಿತಿಕಾ ಸಜ್ದೇ-ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ 
ಕ್ರಿಕೆಟ್

ರಿತಿಕಾ ಜೊತೆ ಕೊಹ್ಲಿ ಡೇಟಿಂಗ್? ರೋಹಿತ್ ಮತ್ತು ಕೊಹ್ಲಿ ನಡುವಿನ ಜಗಳಕ್ಕೆ ಕಾರಣನಾ..?

ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಮುಸುಕಿನ ಗುದ್ದಾಟ ಜಗಜಾಹೀರ್ ಆಗಿತ್ತು.

ಬೆಂಗಳೂರು: ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಮುಸುಕಿನ ಗುದ್ದಾಟ ಜಗಜಾಹೀರ್ ಆಗಿತ್ತು. ಇದಕ್ಕೆ ಪುಷ್ಠಿ ಕೊಡುವಂತಾ ಹಲವು ಬೆಳವಣಿಗೆಗಳು ನಡೆದಿವೆ.
ವೆಸ್ಟ್ ಇಂಡೀಸ್ ಸರಣಿಗಾಗಿ ಟೀಂ ಇಂಡಿಯಾ ತೆರಳಿದೆ. ಆದರೆ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ನಡುವಿನ ಒಳಜಗಳ ಮುಗಿಯುವಂತೆ ಕಾಣುತ್ತಿಲ್ಲ. ಈ ಮಧ್ಯೆ ರೋಹಿತ್ ಶರ್ಮಾ ಪತ್ನಿ ಸಜ್ದೇ ಅವರ ಹೆಸರು ತಳಕು ಹಾಕಿಕೊಂಡಿದೆ. 
ವಿರಾಟ್ ಕೊಹ್ಲಿ 2013ರಲ್ಲಿ ಮುಂಬೈನಲ್ಲಿ ರಜಾ ದಿನವನ್ನು ಕಳೆದಿದ್ದರು. ಈ ವೇಳೆ ರಿತಿಕಾ ಸಜ್ದೇ ಅವರ ಜೊತೆ ಸಿನಿಮಾ ಹಾಲ್ ನಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಇವರು ಮಾಧ್ಯಮಗಳ ಕಣ್ಣಿಗೆ ಬಿದ್ದ ನಂತರ ಹಲವು ಊಹಾಪೋಹಗಳು ಹುಟ್ಟಿಕೊಂಡಿದ್ದವು. ಇದಾದ ಬಳಿಕ ರಿತಿಕಾ ರೋಹಿತ್ ಶರ್ಮಾರನ್ನು ಮದುವೆಯಾಗಿದ್ದರು.
2010ರಲ್ಲಿ ಐಪಿಎಲ್ ಸಮಯದಲ್ಲಿ ವಿರಾಟ್ ಕೊಹ್ಲಿ ಮತ್ತು ರಿತಿಕಾರನ್ನು ಭೇಟಿಯಾಗಿದ್ದರು. ಕಂಪನಿಯ ಉದ್ಯೋಗಿಯಾಗಿದ್ದ ರಿತಿಕಾ ಕೊಹ್ಲಿಯ ವ್ಯವಹಾರ ನೋಡಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದರು. ಅಲ್ಲದೇ ಮೂವಿ ಡೇಟ್, ಡಿನ್ನರ್ ಡೇಟ್ ಗೆ ಕೂಡ ಇವರು ಹೋಗುತ್ತಿದ್ದರು ಎನ್ನಲಾಗಿದೆ. ಈ ವಿಚಾರಗಳು ಮಾಧ್ಯಮಗಳಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾದ ಬಳಿಕ ರಿತಿಕಾ ಕೆಲಸಕ್ಕೆ ಗುಡ್ ಬಾಯ್ ಹೇಳಿದ್ದರಂತೆ. 
ಈಗ ಹಳೆಯ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೊಹ್ಲಿ ಮತ್ತು ರೋಹಿತ್ ಜಗಳಕ್ಕೆ ಇದೇ ಕಾರಣ ಎಂಬ ಚರ್ಚೆಗಳು ಹುಟ್ಟಿಕೊಳ್ಳುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT