ಸಂಗ್ರಹ ಚಿತ್ರ 
ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಬಾಂಗ್ಲಾದೇಶಕ್ಕೆ ಮತ್ತೊಂದು ಆಘಾತ, ತಮೀಮ್ ಇಕ್ಬಾಲ್ ಗೆ ಗಾಯ

ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಬಾಂಗ್ಲಾದೇಶ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ತಮೀಮ್ ಇಕ್ಬಾಲ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಲಂಡನ್: ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಬಾಂಗ್ಲಾದೇಶ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ತಮೀಮ್ ಇಕ್ಬಾಲ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.
ಹೌದು.. ಬ್ಯಾಟಿಂಗ್ ಅಭ್ಯಾಸ ಮಾಡುವ ವೇಳೆ ತಮೀಮ್ ಇಕ್ಬಾಲ್ ಎಡಗೈ ಮಣಿಕಟ್ಟಿನಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಕೂಡಲೇ ತಮೀಮ್ ಅಭ್ಯಾಸವನ್ನು ಮೊಟಕುಗೊಳಿಸಿ ಡ್ರೆಸಿಂಗ್ ರೂಂಗೆ ಓಡಿ ಹೋದ ಘಟನೆ ನಡೆದಿದೆ. ತಮೀಮ್ ರನ್ನು ಪರೀಕ್ಷಿಸಿದ ಫಿಸಿಯೋ ಥಿಯಾನ್ ಚಂದ್ರಮೋಹನ್ ಅವರು ಮುಂಜಾಗ್ರತಾ ಕ್ರಮವಾಗಿ ತಮೀಮ್ ರನ್ನು ಎಕ್ಸ್ ರೇ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಯಾವುದೇ ರೀತಿಯ ಮೂಳೆ ಮುರಿತ ಕಂಡು ಬಂದಿಲ್ಲ. ಆದರೆ ತಮೀಮ್ ಗೆ ಸ್ನಾಯುಸೆಳೆತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಂತೆಯೇ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.
ಇನ್ನು ಭಾರತದ ವಿರುದ್ಧದ ಪಂದ್ಯಕ್ಕೆ ತಮೀಮ್ ಲಭ್ಯತೆ ಕುರಿತು ಇದೀಗ ಆತಂಕ ಮೂಡಿದೆ.
ಈಗಾಗಲೇ ಬಾಂಗ್ಲಾದೇಶ ತಂಡದ ಆಲ್ ರೌಂಡರ್ ಮೊಹಮದ್ ಸೈಫುದ್ದೀನ್ ಗಾಯಗೊಂಡಿರುವುದು ತಂಡದ ಆತಂಕಕ್ಕೆ ಕಾರಣವಾಗಿದ್ದು, ಇದರ ಬೆನ್ನಲ್ಲೇ ತಮೀಮ್ ಕೂಡ ಗಾಯಗೊಂಡಿರುವುದು ಆ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.  ಈ ಹಿಂದೆಯೂ ಕೂಡ ತಮೀಮ್ ತೊಡೆಯ ಸ್ನಾಯು ಸೆಳೆತಕ್ಕೆ ಸಿಲುಕಿ ಭಾರತ ತಂಡದ ವಿರುದ್ಧದ ಅಭ್ಯಾಸ ಪಂದ್ಯದಿಂದ ದೂರ ಉಳಿದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video