ಕ್ರಿಕೆಟ್

ವಿಶ್ವಕಪ್ 2019: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಗೆಲುವಿಗೆ 228 ರನ್ ಗಳ ಟಾರ್ಗೆಟ್

Lingaraj Badiger
ಲಂಡನ್: ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಸ್ಪಿನ್ನರ್ ಯಜುವೇಂದ್ರ ಚಹಲ್ ಮಿಂಚಿನ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ಕೇವಲ 227 ರನ್ ಗಳಿಸುವ ಮೂಲಕ ಟೀಂ ಇಂಡಿಯಾಗೆ 228 ರನ್ ಗಳ ಗೆಲುವಿನ ಟಾರ್ಗೆಟ್ ನೀಡಿದೆ.
ಇಂಗ್ಲೆಂಡ್ ನ ಸೌಥ್ಯಾಂಪ್ಟನ್ ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ, ನಿಗದಿತ 50 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 227 ರನ್ ಗಳಿಸಲಷ್ಟೇ ಶಕ್ತವಾಗಿದೆ. 
ಒಂದು ಹಂತದಲ್ಲಿ 89 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಡೇವಿಡ್ ಮಿಲ್ಲರ್(31), ಆಲ್ರೌಂಡರ್ ಗಳಾದ ಆ್ಯಂಡಿಲೆ ಫೆಲುಕ್ವಾಯೋ(34), ಕ್ರಿಸ್ ಮೋರಿಸ್(42) ಹಾಗೂ ಕಗಿಸೋ ರಬಾಡ ಅಜೇಯ 31 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 220ರ ಗಡಿ ದಾಟಿಸಿದರು.
ಭಾರತದ ಪರ ಯುಜ್ವೇಂದ್ರ ಚಹಲ್ ನಾಲ್ಕು ಮತ್ತು ಜಸ್ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ತಲಾ ಎರಡು ವಿಕೆಟ್ ಹಾಗೂ  ಕುಲ್ದೀಪ್ ಯಾದವ್ ಒಂದು ವಿಕೆಟ್ ಪಡೆದು ಮಿಂಚಿದರು.
ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಇದು ಮೂರನೇ ಪಂದ್ಯವಾಗಿದ್ದು. ಈ ಹಿಂದಿನ ಮೂರು ಪಂದ್ಯಗಳನ್ನು ಸೋಲುವ ಮೂಲಕ ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕತೆ ಸಿಲುಕಿದೆ.
SCROLL FOR NEXT