ರೋ’ಹಿಟ್’ ಶರ್ಮಾ ಭರ್ಜರಿ ಶತಕ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ದಾಖಲಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ.
ಜೂ.05 ರಂದು ನಡೆದ ಸೌತ್ ಆಂಪ್ಟನ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಎದುರಾಳಿ ತಂಡದ ವಿರುದ್ಧ 6 ವಿಕೆಟ್ ಗಳ ಜಯಗಳಿಸಿದೆ.
4 ವಿಕೆಟ್ ಪಡೆದ ಯಜುವೇಂದ್ರ ಚಹಾಲ್ ನೆರವಿನಿಂದ ಭಾರತ ತಂಡ ಎದುರಾಳಿ ತಂಡವನ್ನು ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 227 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಭಾರತ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಿಂದ ಗೆಲುವಿನ ನಗೆ ಬೀರಿತು.
ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲೇ ರೋಹಿತ್ ಶರ್ಮ 23 ನೇ ಒಡಿಐ ಶತಕ ದಾಖಲಿಸಿದ್ದು ಪಂದ್ಯದ ವಿಶೇಷವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics