ಶಿಖರ್ ಧವನ್-ರೋಹಿತ್ ಶರ್ಮಾ 
ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಆಸಿಸ್ ವಿರುದ್ಧ ನಿಧಾನಗತಿಯ ಆರಂಭ ಕಂಡ ಭಾರತ, ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಇಂದು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಧಾನಗತಿಯ ಆರಂಭ ಕಂಡ ಭಾರತ ಉತ್ತಮ ಸ್ಥಿತಿಯಲ್ಲಿದೆ.

ಲಂಡನ್: ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಇಂದು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಧಾನಗತಿಯ ಆರಂಭ ಕಂಡ ಭಾರತ ಉತ್ತಮ ಸ್ಥಿತಿಯಲ್ಲಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ನಿಧಾನಗತಿ ಆರಂಭ ಒದಗಿಸಿದರೂ, ಉತ್ತಮ ಆರಂಭ ನೀಡಿದ್ದಾರೆ. ಆಸಿಸ್ ವೇಗಿಗಳನ್ನು ರಕ್ಷಣಾತ್ಮಕವಾಗಿ ಎದುರಿಸಿದ ಇಬ್ಬರೂ ಆಟಗಾರರೂ ದೊಡ್ಡ ಹೊಡೆತಕ್ಕೆ ಕೈಹಾಕದೇ ರಕ್ಷಣಾತ್ಮಕ ಆಟದ ಮೂಲಕ ಒಂದೊಂದೇ ರನ್ ಗಳನ್ನು ಕಲೆಹಾಕಿ ಭಾರತದ ಉತ್ತಮ ಸ್ಥಿತಿಗೆ ಕಾರಣರಾಗಿದ್ದಾರೆ.
ಇತ್ತೀಚಿನ ವರದಿಗಳು ಬಂದಾಗ 40 ಎಸೆತಗಳನ್ನು ಎದುರಿಸಿರುವ ರೋಹಿತ್ ಶರ್ಮಾ 2 ಬೌಂಡರಿಗಳ ನೆರವಿನೊಂದಿಗೆ 30 ರನ್ ಗಳಿಸಿದ್ದು, 43 ಎಸೆತಗಳನ್ನು ಎದುರಿಸಿರುವ ಶಿಖರ್ ಧವನ್ 5 ಬೌಂಡರಿಗಳ ನೆರವಿನೊಂದಿಗೆ 36 ರನ್ ಗಳನ್ನು ಕಲೆಹಾಕಿದ್ದಾರೆ. ಪ್ರಸ್ತುತ ಭಾರತ ತಂಡ 14 ಓವರ್ ಗಳ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 69 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ