ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ 
ಕ್ರಿಕೆಟ್

ಹೈ ವೋಲ್ಟೇಜ್ ಕದನ: ಆಸ್ಟ್ರೇಲಿಯಾ ವಿರುದ್ದ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಇಂದು ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಲಂಡನ್: ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಇಂದು ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂಗ್ಲೆಂಡ್ ನ ಕೆನ್ನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಟೂರ್ನಿಯಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ದ ತನ್ನ ಮೊದಲ ಪಂದ್ಯವನ್ನು ಗೆದ್ದು ವಿಶ್ವಾಸದಲ್ಲಿದ್ದು, 2ನೇ ಪಂದ್ಯವನ್ನೂ ಗೆಲ್ಲುವ ಹುಮ್ಮಸ್ಸಿನಲ್ಲಿದೆ.
ಇನ್ನು ಟೂರ್ನಿಯಲ್ಲಿ ತಾನಾಡಿರುವ ಎರಡೂ ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ತಂಡ ಈ ಪಂದ್ಯವನ್ನೂ ಗೆದ್ದು ಟೂರ್ನಿಯಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದೆ. ಇನ್ನು ಎರಡೂ ತಂಡಗಳು ತಂಡದಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡಿಲ್ಲ. ಈ ಹಿಂದಿನ ಪಂದ್ಯಗಳಲ್ಲಿ ಆಡಿದ್ದ ಆಟಗಾರರನ್ನೇ ಈ ಪಂದ್ಯಕ್ಕೆ ಮುಂದುವರೆಸಿವೆ.
ತಂಡಗಳು ಇಂತಿವೆ
ಭಾರತ
ಶಿಖರ್ ಧವನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಕೇದಾರ್ ಜಾಧವ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಜಸ್ ಪ್ರೀತ್ ಬಮ್ರಾ
ಆಸ್ಟ್ರೇಲಿಯಾ
ಡೇವಿಡ್ ವಾರ್ನರ್, ಆ್ಯರನ್ ಫಿಂಚ್, ಉಸ್ಮಾನ್ ಖವಾಜಾ, ಸ್ಟೀವೆನ್ ಸ್ಮಿತ್, ಗ್ಲೇನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟಾಯಿನ್ಸ್, ಅಲೆಕ್ಸ್ ಕರಿ, ನಾಥನ್ ಕಾಲ್ಚರ್ ನೈಲ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!