ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಈ ಮಧ್ಯೆ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಗಳು ಹೊಡಿಬಡಿ ಆಟದಲ್ಲಿ ನಿರತರಾಗಿದ್ದು ಎಂಎಸ್ ಧೋನಿ ಸಿಡಿಸಿದ ಭರ್ಜರಿ ಸಿಕ್ಸರ್‌ಗೆ ವಿರಾಟ್ ಕೊಹ್ಲಿ ಕಣ್ಣು ಬಾಯಿ ಅರಳಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.
ಕೆನ್ನಿಂಗ್ಟನ್ ಓವಲ್ ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಔಟಾದ ಬಳಿಕ ಕ್ರೀಸ್ ಗೆ ಬಂದ ಎಂಎಸ್ ಧೋನಿ ಸ್ಫೋಟಕ ಬ್ಯಾಟಿಂಗ್ ಗೆ ಮುಂದಾದರು. ಆಸಿಸ್ ವೇಗಿ ಮಿಚೆಲ್ ಸ್ಟಾರ್ಕ್ ಎಸೆದ 49ನೇ ಓವರ್ ನಲ್ಲಿ ಎಂಎಸ್ ಧೋನಿ ಸಿಕ್ಸರ್ ಬಾರಿಸಿದ್ದರು.
ಧೋನಿ ಸಿಡಿಸಿದ ಚೆಂಡು ಡೀಪ್ ಸ್ವೇರ್ ಲೆಗ್ ನಲ್ಲಿ ದೂರಕ್ಕೆ ಹೋಗಿತ್ತು. ಈ ವೇಳೆ ನಾನ್ ಸ್ಟ್ರೈಕ್ ನಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ ಚೆಂಡು ಹೋಗುವುದನ್ನೇ ನೋಡುತ್ತಾ ನಿಂತರು. ನಂತರ ಧೋನಿ ಕಡೆ ತಿರುಗಿ ಅದ್ಭುತ ಎನ್ನುವಂತೆ ರಿಯಾಕ್ಷನ್ ನೀಡಿ ಗಹಗಹನೆ ನಕ್ಕರು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಧೋನಿ ಕೇವಲ 14 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದಂತೆ 27 ರನ್ ಬಾರಿಸಿ ತಂಡಕ್ಕೆ ಉತ್ತಮ ರನ್ ಕಾಣಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics