ಸಂಗ್ರಹ ಚಿತ್ರ 
ಕ್ರಿಕೆಟ್

ಇಂಗ್ಲೆಂಡ್ ಗೆ ಕ್ರಿಕೆಟ್‌ ಟೂರ್ನಿ ಆತಿಥ್ಯ ರದ್ದು ಮಾಡಿ: ಶಶಿ ತರೂರ್‌

ಇಂಗ್ಲೆಂಡ್ ಹಾಗೂ ವೇಲ್ಸ್‌ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಮೂರು ಪಂದ್ಯಗಳು ಮಳೆಯಿಂದ ರದ್ದಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಸಂಸದ ಶಶಿ ತರೂರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಇಂಗ್ಲೆಂಡ್ ಹಾಗೂ ವೇಲ್ಸ್‌ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಮೂರು ಪಂದ್ಯಗಳು ಮಳೆಯಿಂದ ರದ್ದಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಸಂಸದ ಶಶಿ ತರೂರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಸೋಮವಾರ ಸೌಥ್‌ ಹ್ಯಾಂಪ್ಟನ್ ನಲ್ಲಿ ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್‌ ಇಂಡೀಸ್‌ ನಡುವಿನ ಪಂದ್ಯ ಪ್ರತಿಕೂಲ ಹವಾಮಾನದಿಂದಾಗಿ ರದ್ದಾಗಿತ್ತು. ಅಲ್ಲದೇ, ಮಂಗಳವಾರ ಬ್ರಿಸ್ಟಲ್ ನಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳ ನಡುವಿನ ಪಂದ್ಯ ಕೂಡ ಒಂದೂ ಎಸೆತ ಕಾಣದೆ ರದ್ದಾಯಿತು. ಜತೆಗೆ, ಜೂ. 7 ರಂದು ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವಿನ ಪಂದ್ಯವೂ ಮಳೆಯಿಂದ ರದ್ದಾಗಿತ್ತು. ಇದರೊಂದಿಗೆ ಪ್ರಸಕ್ತ ಆವೃತ್ತಿಯಲ್ಲಿ ಮೂರು ಪಂದ್ಯಗಳು ಮಳೆಯಿಂದ ರದ್ದಾದಂತಾಗಿದೆ.
ಇದೀಗ ಟೂರ್ನಿಯ ಹೈವೋಲ್ಟೇಜ್‌ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೂ ಮಳೆ ಭೀತಿ ಶುರುವಾಗಿದೆ. ಈ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಶಶಿ ತರೂರ್ 'ಜಗತ್ತಿನ ಹವಾಮಾನ ಸಮಸ್ಯೆ ನಿವಾರಣೆ ಆಗುವವರೆಗೂ ಕ್ರಿಕೆಟ್‌ ಟೂರ್ನಿ ಆತಿಥ್ಯ ವಹಿಸುವುದಕ್ಕೆ ಇಂಗ್ಲೆಂಡ್ ಗೆ ನಿಷೇಧ ಹೇರಬೇಕು ಅಥವಾ ಇಂಗ್ಲೆಂಡ್ ನಲ್ಲಿರುವ ಎಲ್ಲ ಕ್ರೀಡಾಂಗಣಗಳಿಗೂ ಮೇಲ್ಛಾವಣೆ ಹಾಕಲು ಕ್ರಮಕೈಗೊಳ್ಳಬೇಕು" ಎಂದು ಹೇಳಿದ್ದಾರೆ. 
ಮೂರು ಪಂದ್ಯಗಳ ರದ್ದಾದ ಬಳಿಕ ಪ್ರತಿಕ್ರಿಯಿಸಿದ ಐಸಿಸಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ  ಡೇವಿಡ್‌ ರಿಚರ್ಡ್‌ಸನ್‌ "ಪ್ರತಿಯೊಂದು ಪಂದ್ಯಕ್ಕೂ ಮೀಸಲು ದಿನ ನೀಡುವುದರಿಂದ ಐಸಿಸಿಯು ಟೂರ್ನಿಯ ಅವಧಿಯನ್ನು ವಿಸ್ತರಿಸುವುದು ಅಗತ್ಯವಾಗಿರುತ್ತದೆ. ಅಲ್ಲದೇ, ಇದನ್ನು ಪ್ರಾಯೋಗಿಕವಾಗಿ ತರುವುದು ಕೂಡ ಕಷ್ಟವಾಗಲಿದೆ" ಎಂದು ಹೇಳಿದ್ದರು. 
"ಮೀಸಲು ದಿನಗಳಿಗೆ ಮೊರೆ ಹೋದರೆ ಇದು ಟೂರ್ನಿಯ ಸ್ವಭಾವದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಪಿಚ್‌ ಸಿದ್ಧತೆ, ತಂಡದ ಚೇತರಿಕೆ, ಪ್ರಯಾಣದ ದಿನಗಳು, ಸೌಕರ್ಯ ಮತ್ತು ಸ್ಥಳ ಲಭ್ಯತೆ, ಪಂದ್ಯಾವಳಿಯ ಸಿಬ್ಬಂದಿ, ಸ್ವಯಂ ಸೇವಕ ಸಿಬ್ಬಂದಿ, ಟೂರ್ನಿಯ ಅಧಿಕಾರಿಗಳ ಲಭ್ಯತೆ, ಪಂದ್ಯ ವೀಕ್ಷಣೆಯ ಪ್ರೇಕ್ಷಕರ ಪ್ರಯಾಣ ಇವುಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದ್ದರಿಂದ ಗುಂಪು ಹಂತದ ಮೀಸಲು ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿ ಅಗತ್ಯವಿರುತ್ತದೆ." ಎಂದು ವಿವರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!