ಐಸಿಸಿ ವಿಶ್ವಕಪ್ 2019: ಬಹುನಿರೀಕ್ಷಿತ ಭಾರತ- ಪಾಕ್ ಪಂದ್ಯಕ್ಕೂ ಮಳೆ ಅಡ್ಡಿ!?
ಐಸಿಸಿ ವಿಶ್ವಕಪ್ 2019 ರ ಟೂರ್ನಿಯಲ್ಲಿ ಮಳೆಯ ಕಾರಣದಿಂದ ಪಂದ್ಯಗಳು ಒಂದರ ಮೇಲೆ ಒಂದು ರದ್ದಾಗುತ್ತಿದ್ದು, ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮಳೆ ಅಡ್ಡಿ ಬರುವ ಸಾಧ್ಯತೆ ಇದೆ.
ಮಾಂಚೆಸ್ಟರ್: ಐಸಿಸಿ ವಿಶ್ವಕಪ್ 2019 ರ ಟೂರ್ನಿಯಲ್ಲಿ ಮಳೆಯ ಕಾರಣದಿಂದ ಪಂದ್ಯಗಳು ಒಂದರ ಮೇಲೆ ಒಂದು ರದ್ದಾಗುತ್ತಿದ್ದು, ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮಳೆ ಅಡ್ಡಿ ಬರುವ ಸಾಧ್ಯತೆ ಇದೆ.
ಭಾನುವಾರದಂದು ಮಾಂಚೆಸ್ಟರ್ ನಲ್ಲಿ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯ ನಿಗದಿಯಾಗಿದ್ದು, ಆ ದಿನದಂದು ಮಳೆ ಬರುವ ಸಾಧ್ಯತೆಯೂ ದಟ್ಟವಾಗಿದೆ.
ವಿಶ್ವಕಪ್ ನ ಇತಿಹಾಸದಲ್ಲೇ 2019 ರ ಆವೃತ್ತಿಯಲ್ಲಿ ಅತಿ ಹೆಚ್ಚು ಪಂದ್ಯಗಳು ಮಳೆಯಿಂದ ರದ್ದಾಗಿದ್ದು 18 ಪಂದ್ಯಗಳ ಪೈಕಿ 4 ಪಂದ್ಯಗಳು ಮಳೆಯಿಂದ ರದ್ದಾಗಿದೆ.
ಭಾರತ-ನ್ಯೂಜಿಲ್ಯಾಂಡ್ ಪಂದ್ಯವೂ ರದ್ದಾಗಿದ್ದು, ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.