ಜಾಹೀರಾತು 
ಕ್ರಿಕೆಟ್

ಜಾಹೀರಾತಿನಲ್ಲಿ ಪಾಕಿಸ್ತಾನಕ್ಕೆ ಅವಮಾನ: ಐಸಿಸಿಗೆ ಪಾಕ್ ಕ್ರಿಕೆಟ್ ಮಂಡಳಿ ದೂರು

ಜಾಹೀರಾತಿನಲ್ಲಿ ಪಾಕಿಸ್ತಾನಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪ್ರಸಾರ ಹಕ್ಕು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ದೂರು ನೀಡಿದೆ.

 ಮ್ಯಾಂಚೆಸ್ಟರ್ : ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಸಂಬಂಧಿಸಿದ ಜಾಹೀರಾತಿನಲ್ಲಿ ಪಾಕಿಸ್ತಾನಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪ್ರಸಾರ ಹಕ್ಕು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ದೂರು ನೀಡಿದೆ.
 ಈ ಕುರಿತು ಐಸಿಸಿ ಅಧಿಕಾರಿಗಳು ವಾಹಿನಿಗೆ ಎಚ್ಚರಿಕೆ ನೀಡಿದ್ದಾರೆ.ಆದರೆ, ಬಿಸಿಸಿಐ ಏನನ್ನೂ ಪ್ರತಿಕ್ರಿಯಿಸಿಲ್ಲ.  ಪಿಸಿಬಿಯ ಪರವಾಗಿ ಎಹ್ಸಾನ್ ಮನಿ ಅವರು ಐಸಿಸಿಗೆ ದೂರು ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ. ಆದರೆ, ದೂರು ಲಿಖಿತವಾಗಿದೆಯೋ ಅಥವಾ ದೂರವಾಣಿ ಮೂಲಕ ಸಲ್ಲಿಸಲಾಗಿದೆಯೋ ಗೊತ್ತಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತ ವಿರುದ್ಧದ ಪಂದ್ಯದ ಕುರಿತ ಮೌಕಾ ಮೌಕಾ ಎಂಬ ಜಾಹೀರಾತಿನಲ್ಲಿ ಭಾರತದ ಅಭಿಮಾನಿಗಳು ಪಾಕಿಸ್ತಾನದ ಅಭಿಯಾನಿಗಳನ್ನು ಹೀಯಾಳಿಸುವಂತೆ ಚಿತ್ರಿಸಲಾಗಿದೆ ಎಂದು ಪಿಸಿಬಿ ದೂರಿನಲ್ಲಿ ಹೇಳಿದೆ ನ್ನಲಾಗಿದೆ. ವಿಶ್ವಕಪ್ ನಲ್ಲಿ ಭಾರತ ಎದುರಿನ ಆರು ಪಂದ್ಯಗಳನ್ನು ಪಾಕಿಸ್ತಾನ ಸೋತಿರುವುದು ಜಾಹೀರಾತಿನ ತಿರುಳಾಗಿದೆ.
 ಜಾಹೀರಾತಿನಲ್ಲಿ ಬಾಂಗ್ಲಾದೇಶದ ಕ್ರಿಕೆಟ್ ಪ್ರೇಮಿಯೊಬ್ಬ ಪಾಕಿಸ್ತಾನದ ಅಭಿಮಾನಿಯೊಂದಿಗೆ ಮಾತನಾಡುತ್ತ ಭಾರತ ವಿರುದ್ಧದ ಪಂದ್ಯದ ಬಗ್ಗೆ ಅಭಿಪ್ರಾಯ ಕೇಳುತ್ತಾನೆ. ಆಗ ಪಾಕಿಸ್ತಾನದ ಅಭಿಮಾನಿ ಮರಳಿ ಯತ್ನನ ಮಾಡು ಎಂದು ನನ್ನ ಅಪ್ಪ ಹೇಳಿದ್ದಾರೆ ಎನ್ನುತ್ತಾನೆ. ಪಕ್ಕದಲ್ಲಿರುವ ಭಾರತದ ಅಭಿಮಾನಿ ನಾನು ಯಾವತ್ತೂ ಹಾಗೆ ಹೇಳಲಿಲ್ಲ ಎನ್ನುತ್ತಾನೆ.
 ಈ ಮಧ್ಯೆ   ಭಾರತದ ವಾಹಿನಿಯೊಂದರ ಪ್ರತಿನಿಧಿಗಳು ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ಮಾನ್ಯತೆಯನ್ನು ರದ್ದು ಮಾಡಲಾಗಿದೆ. ವಾಹಿನಿಯ ವರದಿಗಾರ ಮತ್ತು ಕ್ಯಾಮರಾಮನ್ ಕೊಹ್ಲಿ ಅವರ ಪಂದ್ಯಪೂರ್ವ ಪತ್ರಿಕಾಗೋಷ್ಠಿಯ ನೇರ ಪ್ರಸಾರ ಮಾಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕೊಹ್ಲಿ ಪತ್ರಿಕಾಗೋಷ್ಠಿಯನ್ನು ಫೇಸ್ ಬುಕ್ ಲೈವ್ ಮೂಲಕ ತೋರಿಸಿದ್ದರಿಂದ ಅವರಿಗೆ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT