ವಿಶ್ವಕಪ್ ಕ್ರಿಕೆಟ್: ಪಾಕ್ ವಿರುದ್ಧ ಟೀಂ ಇಂಡಿಯಾಗೆ 7ನೇ ಐತಿಹಾಸಿಕ ಗೆಲುವು 
ಕ್ರಿಕೆಟ್

ವಿಶ್ವಕಪ್ ಕ್ರಿಕೆಟ್: ಪಾಕ್ ವಿರುದ್ಧ ಟೀಂ ಇಂಡಿಯಾಗೆ 7ನೇ ಐತಿಹಾಸಿಕ ಗೆಲುವು

ಬದ್ದ ವೈರಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯ ಭರ್ಜರಿ ಜಯ ದಾಖಲಿಸಿದೆ. ಇದರೊಡನೆ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದಂತಾಗಿದೆ.

ಮ್ಯಾಂಚ್ದೆಸ್ಟರ್: ಬದ್ದ ವೈರಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯ ಭರ್ಜರಿ ಜಯ ದಾಖಲಿಸಿದೆ. ಇದರೊಡನೆ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದಂತಾಗಿದೆ.
ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ್ದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಪಂದ್ಯದ 35 ಓವರ್ ವೇಳೆಗೆ ಪಾಕ್  6 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿದ್ದಾಗ ಮಳೆ ಪ್ರಾರಂಭವಾಗಿದ್ದು ಪಂದ್ಯ ಕೆಲ ಕಾಲ ಸ್ಥಗಿತವಾಗಿತ್ತು.
ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡಕ್ವರ್ತ್​ ನಿಯಮದ ಅನ್ವಯ ಪಾಕ್​ಗೆ ಗೆಲ್ಲಲು 30 ಎಸೆತಗಳಲ್ಲಿ 136 ರನ್​ಗಳ ಟಾರ್ಗೆಟ್ ನಿಡಲಾಗಿತ್ತು.

ಆದರೆ ಪಾಕಿಸ್ತಾನದ ಆಟಗಾರರಿಗೆ ಈ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಅಂತಿಮವಾಗಿ ವಾಸಮ್ 46 ಶದಾಬ್ ಖಾನ್ 20 ರನ್ ಗಳಿಸಿ ಅಜೇಯರಾಗಿ ಉಳಿದೂ 212 ರನ್ ಗಳಿಸಲಷ್ಟೇ  ಸಾಧ್ಯವಾಗಿತ್ತು.

ಈ ಮೂಲಕ ಭಾರತಕ್ಕೆ 89 ರನ್ ಗಳ ರೋಚಕ ಗೆಲುವು ದಕ್ಕಿದೆ.

ಪ್ರಸಕ್ತ ವಿಶ್ವಕಪ್ ನಲ್ಲಿ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ದಾಖಲಿಸಿರುವ ಟೀಂ ಇಂಡಿಯಾ 7 ಅಂಕ ಪಡೆದು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನಕ್ಕೇರಿದೆ.

ಇನ್ನು ಪಾಕ್ ಇದುವರೆಗೆ ಆಡಿದ ಐದು ಪಂದ್ಯದಲ್ಲಿ ಮೂರು ಸೋಲು ಕಂಡು 3 ಅಂಕಗಳೊಡನೆ ಒಂಬತ್ತನೇ ಸ್ಥಾನದಲ್ಲೇ ಸ್ಥಿರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?