ಕ್ರಿಕೆಟ್

ವಿಶ್ವ ದಾಖಲೆಯ ಹೊಸ್ತಿಲಲ್ಲಿ ದ.ಆಫ್ರಿಕಾ ಸ್ಪಿನ್ನರ್ ಇಮ್ರಾನ್ ತಾಹಿರ್!

Srinivasamurthy VN
ಲಂಡನ್: ಹಾಲಿ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡದ ಸ್ಪಿನ್ನರ್ ಇಮ್ರಾನ್ ತಾಹಿರ್ ವಿಶ್ವದಾಖಲೆಯ ಹೊಸ್ತಿಲಲ್ಲಿದ್ದಾರೆ.
ದಕ್ಷಿಣ ಆಫ್ರಿಕಾ ತಂಡದ ಲೆಗ್‌ ಸ್ಪಿನ್ನರ್‌ ಇಮ್ರಾನ್‌ ತಾಹಿರ್‌ ಅವರು ಇಂಗ್ಲೆಂಡ್‌ ಹಾಗೂ ವೇಲ್ಸ್‌ ಆತಿಥ್ಯದಲ್ಲಿ ನಡೆಯುತ್ತಿರುವ ಈ ಬಾರಿಯ ಐಸಿಸಿ ವಿಶ್ವಕಪ್‌ನಲ್ಲಿ ಇಂದು ನಡೆಯುವ 25ನೇ ಪಂದ್ಯದಲ್ಲಿ ಇತಿಹಾಸ ನಿರ್ಮಿಸುವ ಹಾದಿಯ್ಲಲಿದ್ದಾರೆ.
ಇಂದು ಬರ್ಮಿಂಗ್‌ಹ್ಯಾಮ್‌ನ ಎಡ್ಜ್ ಬಾಸ್ಟನ್‌ನಲ್ಲಿ ನಡೆಯಲಿರುವ ನ್ಯೂಜಿಲೆಂಡ್‌ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ಇಮ್ರಾನ್‌ ತಾಹಿರ್‌ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ. ತಾಹಿರ್ ಕೇವಲ ಇನ್ನೆರಡು ವಿಕೆಟ್‌ ಪಡೆದರೆ ದಕ್ಷಿಣ ಆಫ್ರಿಕಾ ಪರ ವಿಶ್ವಕಪ್‌ ನಲ್ಲಿ ಅತೀ ಹೆಚ್ಚು ವಿಕೆಟ್ ಗಳಿಸಿದ ಮೊದಲ ಬೌಲರ್ ಎಂಬ ದಾಖಲೆಗೆ 40ರ ಹರೆಯದ ತಾಹಿರ್ ಭಾಜನರಾಗಲಿದ್ದಾರೆ.
ಈ ಬಾರಿಯ ವಿಶ್ವಕಪ್ ನ ಒಟ್ಟು 5 ಪಂದ್ಯಗಳಲ್ಲಿ ತಾಹಿರ್ 8 ವಿಕೆಟ್‌ಗಳನ್ನು ಪಡೆದಿದ್ದಾರೆ. ಸದ್ಯ ಈ ವಿಶ್ವಕಪ್‌ ಆವೃತ್ತಿಯಲ್ಲಿ ದಕ್ಷಿಣ ಆಫ್ರಿಕಾ ಪರ ಅತ್ಯಧಿಕ ವಿಕೆಟ್ ಸರದಾರರಲ್ಲಿ ತಾಹಿರ್ ಮುಂಚೂಣಿಯಲ್ಲಿದ್ದಾರೆ. ಈವರೆಗೆ ತಾಹಿರ್ ವಿಶ್ವಕಪ್‌ನಲ್ಲಿ 37 ವಿಕೆಟ್‌ಗಳನ್ನು ಗಳಿಸಿದ್ದಾರೆ. 
ಉಳಿದಂತೆ ದಕ್ಷಿಣ ಆಫ್ರಿಕಾ ಪರ ಮಾಜಿ ಕ್ರಿಕೆಟಿಗ ಅಲನ್ ಡೊನಾಲ್ಡ್ 38 ವಿಕೆಟ್ ಪಡೆದು ಅಗ್ರ ಸ್ಥಾನದಲ್ಲಿದ್ದು, 31 ವಿಕೆಟ್ ಪಡೆದಿರುವ ಮಾಜಿ ವೇಗಿ ಸಾನ್ ಪೊಲಾಕ್ ಮೂರನೇ ಸ್ಥಾನದಲ್ಲಿದ್ದಾರೆ.
SCROLL FOR NEXT