ಆಂಡ್ರೆ ರಸ್ಸೆಲ್ 
ಕ್ರಿಕೆಟ್

ಆಂಡ್ರೆ ರಸ್ಸೆಲ್ ವಿಶ್ವಕಪ್ ಟೂರ್ನಿಯಿಂದ ಔಟ್, ಸುನಿಲ್ ಆಂಬ್ರಿಸ್ ಬದಲಿ ಆಟಗಾರ

ನಿರಂತರ ಮೊಣಕಾಲು ಸಮಸ್ಯೆಯಿಂದಾಗಿ ವೆಸ್ಟ್ ಇಂಡೀಸ್ ಆಲ್ ರೌಂಡರ್ ಆಂಡ್ರೆ ರಸ್ಸೆಲ್ ವಿಶ್ವಕಪ್ ಕ್ರಿಕೆಟ್ ಟೂರ್ನಿಯಿಂದ ಹೊರ ಬಿದಿದ್ದಾರೆ. ಅವರ ಜಾಗಕ್ಕೆ ಸುನೀಲ್ ಅಂಬ್ರೀಸ್ ಬದಲಿ ಆಟಗಾರನಾಗಿ ಸ್ಥಾನ ಪಡೆದುಕೊಂಡಿದ್ದಾರೆ.

ಲಂಡನ್ :ನಿರಂತರ ಮೊಣಕಾಲು ಸಮಸ್ಯೆಯಿಂದಾಗಿ ವೆಸ್ಟ್ ಇಂಡೀಸ್ ಆಲ್ ರೌಂಡರ್  ಆಂಡ್ರೆ ರಸ್ಸೆಲ್  ವಿಶ್ವಕಪ್ ಕ್ರಿಕೆಟ್ ಟೂರ್ನಿಯಿಂದ ಹೊರ ಬಿದಿದ್ದಾರೆ. ಅವರ ಜಾಗಕ್ಕೆ ಸುನೀಲ್ ಅಂಬ್ರೀಸ್  ಬದಲಿ ಆಟಗಾರನಾಗಿ ಸ್ಥಾನ ಪಡೆದುಕೊಂಡಿದ್ದಾರೆ.
ಗಾಯದ ಸಮಸ್ಯೆ ಎದುರಿಸುತ್ತಿರುವ  ರಸ್ಸೆಲ್  ನಾಲ್ಕು ಪಂದ್ಯಗಳನ್ನು ಹೇಗೋ ನಿರ್ವಹಣೆ ಮಾಡಿದ್ದರು.ವೆಸ್ಟ್ ಇಂಡೀಸ್ ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅದ್ಬುತ ಬೌಲಿಂಗ್ ಪ್ರದರ್ಶನ ನೀಡಿದ್ದ ರಸ್ಸೆಲ್ ನಂತರದ ಪಂದ್ಯಗಳಲ್ಲಿ ಬ್ಯಾಟಿಂಗ್  ಅಥವಾ ಬೌಲಿಂಗ್ ನಲ್ಲಿ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಮೂರು ಇನ್ನಿಂಗ್ಸ್ ಗಳಲ್ಲಿ 36 ರನ್ ಗಳಿಸಿದ್ದು,  ನಾಲ್ಕು ಪಂದ್ಯಗಳಲ್ಲಿ ಐದು ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.
2017ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲ ಬಾರಿಗೆ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಆಂಬ್ರಿಸ್, ಕೇವಲ ಆರು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ್ದಾರೆ. ಆದಾಗ್ಯೂ, ಕಳೆದ ವಾರ ಐರ್ಲೆಂಡ್ ವಿರುದ್ಧದ ಮೂರು ಸರಣಿಗಳಲ್ಲಿ 148 ರನ್ ಗಳಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT