ಪಾಕಿಸ್ತಾನಕ್ಕೆ ಜಯ 
ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಆಫ್ಘನ್ ವಿರುದ್ಧ ಪಾಕಿಸ್ತಾನಕ್ಕೆ 3 ವಿಕೆಟ್ ಗಳ ಪ್ರಯಾಸದ ಗೆಲುವು

ಸಾಧಾರಣ ಗುರಿಯನ್ನು ಬೆನ್ನು ಹತ್ತಲು ತಿಣುಕಾಡಿದ ಪಾಕಿಸ್ತಾನ ತಂಡ ಕೊನೆಗೂ ಕ್ರಿಕೆಟ್ ಶಿಶು ಆಫ್ಘಾನಿಸ್ತಾನ ವಿರುದ್ದ 3 ವಿಕೆಟ್ ಗಳ ಪ್ರಯಾಸದ ಗೆಲುವು ಸಾಧಿಸಿದೆ.

ಲೀಡ್ಸ್: ಸಾಧಾರಣ ಗುರಿಯನ್ನು ಬೆನ್ನು ಹತ್ತಲು ತಿಣುಕಾಡಿದ ಪಾಕಿಸ್ತಾನ ತಂಡ ಕೊನೆಗೂ ಕ್ರಿಕೆಟ್ ಶಿಶು ಆಫ್ಘಾನಿಸ್ತಾನ ವಿರುದ್ದ 3 ವಿಕೆಟ್ ಗಳ ಪ್ರಯಾಸದ ಗೆಲುವು ಸಾಧಿಸಿದೆ.
ಲೀಡ್ಸ್ ನ ಹೆಡಿಂಗ್ಲೇಯಲ್ಲಿ ಇಂದು ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪಾಕಿಸ್ತಾನ ತಂಡ ಆಫ್ಘಾನಿಸ್ತಾನ ವಿರುದ್ಧ 3 ವಿಕೆಟ್ ಗಳ ಜಯ ದಾಖಲಿಸಿದೆ. ಆ ಮೂಲಕ ಸೆಮೀಸ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಆಪ್ಘಾನಿಸ್ತಾನ ನೀಡಿದ 228 ರನ್ ಗಳ ಗುರಿಯನ್ನು ಹಿಂಬಾಲಿಸಿದ ಪಾಕಿಸ್ತಾನ ತಂಡ 49.4 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 230 ರನ್ ಗಳಿಸಿ ಗುರಿ ಮುಟ್ಟಿತು. ಪಾಕಿಸ್ತಾನಕ್ಕೆ ಆರಂಭದಲ್ಲೇ ಆಘಾತ ನೀಡಿದ ಆಫ್ಘನ್ ಬೌಲರ್ ಮುಜೀಬ್, ಫಕರ್ ಜಮಾನ್ ರನ್ನು ಶೂನ್ಯಕ್ಕೆ ಔಟ್ ಮಾಡಿದರು. ಬಳಿಕ ಇಮಾಮ್ ಉಲ್ ಹಕ್ ಮತ್ತು ಬಾಬರ್ ಅಜಾಮ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. 
ಖಾತೆ ತೆರೆಯುವ ಮುನ್ನವೇ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಬಾಬರ್ ಅಜಮ್ ಹಾಗೂ ಇಮಾಮ್ ಉಲ್ ಹಕ್ ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ ಅಫ್ಘಾನ್ ಬೌಲರ್ ಗಳ ತಂತ್ರವನ್ನು ಅರಿತು ಬ್ಯಾಟ್ ಮಾಡಿತು. ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಇಮಾಮ್ 36 ರನ್ ಗಳಿಗೆ ಆಟ ಮುಗಿಸಿದರು. ಎರಡನೇ ವಿಕೆಟ್ ಗೆ ಇಮಾಮ್ ಹಾಗೂ ಬಾಬರ್ 72 ರನ್ ಜೊತೆಯಾಟದ ಕಾಣಿಕೆ ನೀಡಿದರು. ನಾಯಕ ಸರ್ಫರಾಜ್ 18 ರನ್ ಗಳಿಸಿ ರನೌಟ್ ಗೆ ಬಲಿಯಾದರೆ, ಹ್ಯಾರಿಸ್ ಸೊಹೇಲ್ ರಷೀದ್ ಖಾನ್ ಗೆ ವಿಕೆಟ್ ಒಪ್ಪಿಸಿದರು.
ಟಾರ್ಗೆಟ್ ಕಡಿಮೆ ಇದ್ದರೂ ಆಪ್ಘನ್ ಬೌಲರ್ ಗಳ ಶಿಸ್ತಿನ ದಾಳಿ ಎದುರು ಪಾಕಿಸ್ತಾನಿ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡಿದರು. ಅಂತಿಮವಾಗಿ ಇಮಾದ್ ವಸೀಮ್ (ಅಜೇಯ 49 ರನ್) ಅವರ ಅಜೇಯ ಆಟದ ನೆರವಿನಿಂದ ಪಾಕಿಸ್ತಾನ ತಂಡ ಇನ್ನೂ ಎರಡು ಎಸೆತ ಬಾಕಿ ಇರುವಂತೆ ಗುರಿ ಮುಟ್ಟಿ ನಿಟ್ಟುಸಿರು ಬಿಟ್ಟಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ನೀವು ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!