ಲಂಡನ್: ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿ ಇಂದು ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿರುವಂತೆಯೇ ಇತ್ತ ಖ್ಯಾತ ಬಾಲಿವುಡ್ ನಟ ರಿಷಿಕಪೂರ್ ಅವರ ಟ್ವೀಟ್ ವೈರಲ್ ಆಗುತ್ತಿದೆ.
ಇಂದು ಭಾರತ ತಂಡ ಇಂಗ್ಲೆಂಡ್ ತಂಡವನ್ನು ಮಣಿಸಲಿ ಎಂದು ಬರೊಬ್ಬರಿ ಮೂರು ರಾಷ್ಟ್ರಗಳ ತಂಡಗಳು ಮತ್ತು ಅವರ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ, ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಭಾರತದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿವೆ.
ಹಾಲಿ ವಿಶ್ವಕಪ್ ಟೂರ್ನಿ ಇದೀಗ ನಿರ್ಣಾಯಕ ಹಂತ ತಲುಪಿದ್ದು, ಈಗಾಗಲೇ ಆಸ್ಟ್ರೇಲಿಯಾ ತಂಡ ಸೆಮೀಸ್ ನಲ್ಲಿ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದ್ದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ಸೆಮೀಸ್ ಪ್ರವೇಶ ಬಹುತೇಕ ಖಚಿತವಾಗಿದೆ. ಆದರೆ ಉಳಿದ ನಾಲ್ತನೇ ತಂಡಕ್ಕಾಗಿ ನಾಲ್ಕು ತಂಡಗಳ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಇಂಗ್ಲೆಂಡ್, ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ನಾಲ್ಕನೇ ಸ್ಥಾನಕ್ಕಾಗಿ ಅದೃಷ್ಟ ಪರೀಕ್ಷೆಗೆ ನಿಂತಿವೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಟ ರಿಷಿಕಪೂರ್ ಟ್ವೀಟ್ ಮಾಡಿದ್ದು, ಭಾನುವಾರದ ಭಾರತ ವರ್ಸಸ್ ಇಂಗ್ಲೆಂಡ್ ಪಂದ್ಯ ಅತ್ಯಂತ ವಿಶೇಷವಾಗಿದ್ದು, 1.2 ಬಿಲಿಯನ್ ಭಾರತೀಯರು, 200 ಮಿಲಿಯನ್ ಪಾಕಿಸ್ತಾನೀಯರು, 150 ಮಿಲಿಯನ್ ಬಾಂಗ್ಲಾದೇಶಿಯರು, 25 ಮಿಲಿಯನ್ ಶ್ರೀಲಂಕನ್ನರು ಭಾರತ ತಂಡದ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಸೋತರೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ಟೂರ್ನಿಯಿಂದ ಹೊರ ಬೀಳಲಿವೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics