ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ರೋ'ಹಿಟ್' ಶರ್ಮಾ!

Srinivasamurthy VN
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತದ ಸ್ಫೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ.
ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ ಬೃಹತ್ ಮೊತ್ತವನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ಆರಂಭಿಕ ಆಟಗಾರ ರೋಹಿತ್ ಶರ್ಮಾ ಆಸರೆಯಾಗಿದ್ದು, 106 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. 94.23 ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ರೋಹಿತ್ ಶರ್ಮಾ, 15 ಬೌಂಡರಿಗಳ ಸಮೇತ ಶತಕ ಸಿಡಿಸಿದ್ದಾರೆ.
ಇಂಗ್ಲೆಂಡ್ ನೀಡಿದ್ದ 338 ರನ್ ಗಳ ಗುರಿ ಬೆನ್ನು ಹತ್ತಿದ ಭಾರತಕ್ಕೆ ಇಂಗ್ಲೆಂಡ್ ಆರಂಭಿಕ ಆಘಾತ ನೀಡಿತ್ತು. ಆರಂಭಿಕ ಆಟಗಾರ ಕೆಎಲ್ ರಾಹುಲ್ ಶೂನ್ಯಕ್ಕೆ ಔಟ್ ಆಗುವ ಮೂಲಕ ಭಾರತ ಒತ್ತಡಕ್ಕೆ ಸಿಲುಕಿತು. ಆದರೆ ಬಳಿಕ ರೋಹಿತ್ ಜೊತೆಗೂಡಿದ ನಾಯಕ ವಿರಾಟ್ ಕೊಹ್ಲಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಅಂತೆಯೇ ಅತ್ಯುತ್ತಮವಾಗಿ ಬ್ಯಾಟ್ ಬೀಸಿದ ಕೊಹ್ಲಿ 76 ಎಸೆತಗಳಲ್ಲಿ 66 ರನ್ ಗಳಿಸಿ ಪ್ಲಂಕೆಟ್ ವಿಕೆಟ್ ಒಪ್ಪಿಸಿದರು. ಅಷ್ಟು ಹೊತ್ತಿಗಾಗಲೇ ರೋಹಿತ್ ಶರ್ಮಾ ಕೂಡ ಅರ್ಧಶತಕ ಸಿಡಿಸಿ ಶತಕದತ್ತ ಮುನ್ನುಗ್ಗಿದ್ದರು. 
ಈ ವೇಳೆ ರಿಷಬ್ ಪಂತ್ ಜೊತೆಗೂಡಿದ ರೋಹಿತ್ ಶರ್ಮಾ ಶತಕದ ರನ್ ಸಿಡಿಸಿ ಸಂಭ್ರಮಿಸಿದರು. ರೋಹಿತ್ ಶರ್ಮಾಗೆ ಇದು ಏಕದಿನ ವೃತ್ತಿ ಜೀವನದ 25ನೇ ಶತಕವಾಗಿದೆ.
SCROLL FOR NEXT