ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಅಭ್ಯಾಸದ ವೇಳೆ ಗಾಯಗೊಂಡಿದ್ದು, ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ ಆಡುವುದು ಅನುಮಾನ ಎನ್ನಲಾಗುತ್ತಿದೆ.
ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್ ಧೋನಿ ಅವರು ಹೈದರಾಬಾದ್‌ನಲ್ಲಿ ನಡೆಯುವ ಆಸೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಸಜ್ಜಾಗುತ್ತಿದ್ದ ವೇಳೆ ಬಲಗೈಗೆ ನೋವು ಮಾಡಿಕೊಂಡಿದ್ದಾರೆ.
ಧೋನಿ ನೆಟ್ ನಲ್ಲಿ ದೀರ್ಘಾವಧಿಯ ಅಭ್ಯಾಸದಲ್ಲಿ ತೊಡಗಿದ್ದಾಗ ರಾಘವೇಂದ್ರ ಎಸೆದ ಚೆಂಡು ಅವರ ಬಲಗೈಗೆ ಬಡಿದಿದೆ. ಆದರೆ ಗಾಯ ಎಷ್ಟು ಆಳವಾಗಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.
ಒಂದು ವೇಳೆ ಧೋನಿ ಗಾಯದ ಭೀತಿಯಿಂದ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯವಾದರೆ ಅವರ ರಿಷಭ್ ಪಂತ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos