ಮೊದಲ ಏಕದಿನ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ 
ಕ್ರಿಕೆಟ್

ಮೊದಲ ಏಕದಿನ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಬಾರತ-ಆಸ್ಟ್ರೇಲಿಯಾ ನಡುವಿನ ಎರಡು ಟಿ20 ಪಂದ್ಯದ ನಂತರ ಏಕದಿನ ಕ್ರಿಕೆಟ್ ಸರಣಿ ಪ್ರಾರಂಬಗೊಂಡಿದ್ದು ಶನಿವಾರ ನಡೆಯುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಹೈದರಾಬಾದ್: ಬಾರತ-ಆಸ್ಟ್ರೇಲಿಯಾ ನಡುವಿನ ಎರಡು ಟಿ20 ಪಂದ್ಯದ  ನಂತರ ಏಕದಿನ ಕ್ರಿಕೆಟ್ ಸರಣಿ ಪ್ರಾರಂಬಗೊಂಡಿದ್ದು ಶನಿವಾರ ನಡೆಯುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಟೀಂ ಇಂಡಿಯಾದಲ್ಲಿ ಕೆ.ಎಲ್. ರಾಹುಲ್ ಬದಲು ಅಂಬಟಿ ರಾಯಡು ಸ್ಥಾನ ಗಳಿಸಿದ್ದಾರೆ. ರೋಹಿತ್ ಶರ್ಮಾ, ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ರವೀಂದ್ರ ಜಡೇಜಾ, ಕೇದಾರ್ ಜಾಧವ್, ವಿಜಯ್ ಶಂಕರ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೌಲಿಂಗ್ ವಿಭಾಗದ ಕುರಿತು ಹೇಳುವುದಾದರೆ ಚಹಾಲ್ ಅವರನ್ನು ಕೈಬಿಡಲಾಗಿದ್ದು ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಬುಮ್ರಾ ತಂಡದಲ್ಲಿದ್ದಾರೆ.
ಅಸೀಸ್ ತಂಡದಲ್ಲಿ ಆಶ್ಟನ್ ಟರ್ನರ್  ಚೊಚ್ಚಲ ಏಕದಿನ ಪಂದ್ಯವನ್ನಾಡುವ ಅವಕಾಶ ಗಳಿಸಿದ್ದಾರೆ.  ಜೇ ರಿಚರ್ಡ್ಸಸನ್ ಅವರ ಬದಲು  ಅಲೆಕ್ಸ್ ಕ್ಯಾರಿ  ತಂಡಕ್ಕೆ ಆಗಮಿಸಿದ್ದಾರೆ.
ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ  ಪಂದ್ಯ ಆಯೋಜನೆಯಾಗಿದೆ. ಟಿ20  ಸರಣಿ ಸೋಲುಂಡ ಟೀಂ ಇಂಡಿಯಾ ಏಕದಿನ ಸರಣಿ ಜಯಿಸಿ ಎದುರಾಳಿಗಳಿಗೆ ತಿರುಗೇಟು ನೀಡುವ ಇರಾದೆಯನ್ನು ಹೊಂದಿದೆ. ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭವಾಗುವ ವಿಶ್ವಕಪ್ ಪಂದ್ಯಾವಳಿಗೆ ಸಹ ಇದು ಅಂತಿಮ ತಯಾರಿ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT