ರವಿಶಾಸ್ತ್ರಿ 
ಕ್ರಿಕೆಟ್

ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಕಾಂಟ್ರ್ಯಾಕ್ಟ್ ವಿಸ್ತರಣೆ ಷರತ್ತು ಇಲ್ಲ: ಬಿಸಿಸಿಐ

2019ರ ಏಕದಿನ ವಿಶ್ವಕಪ್ ವರೆಗೂ ಟೀಂ ಇಂಡಿಯಾ ಕ್ರಿಕೆಟ್ ತಂಡದ ಹಾಲಿ ಕೋಚ್ ರವಿಶಾಸ್ತ್ರಿ ಅವರ ಗುತ್ತಿಗೆ ಇರಲಿದ್ದು ಆ ಬಳಿಕ ಗುತ್ತಿಗೆ ವಿಸ್ತರಣೆ ಇಲ್ಲ ಎಂದ ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: 2019ರ ಏಕದಿನ ವಿಶ್ವಕಪ್ ವರೆಗೂ ಟೀಂ ಇಂಡಿಯಾ ಕ್ರಿಕೆಟ್ ತಂಡದ ಹಾಲಿ ಕೋಚ್ ರವಿಶಾಸ್ತ್ರಿ ಅವರ ಗುತ್ತಿಗೆ ಇರಲಿದ್ದು ಆ ಬಳಿಕ ಗುತ್ತಿಗೆ ವಿಸ್ತರಣೆ ಷರತ್ತು ಇಲ್ಲ ಎಂದ ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.
ಗುತ್ತಿಗೆ ಅವಧಿ ಮುಕ್ತಾಯದ ಬಳಿಕ ಮತ್ತೆ ಕೋಚ್ ಆಗಿ ಮುಂದುವರೆಯ ಬೇಕಿದ್ದರೆ ರವಿಶಾಸ್ತ್ರಿ ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ. ಗುತ್ತಿಗೆ ಅವಧಿಯನ್ನು ವಿಸ್ತರಿಸುವ ಬಗ್ಗೆ ಹಳೆಯ ಒಪ್ಪಂದದಲ್ಲಿ ಉಲ್ಲೇಖಿಸಲಾಗಿಲ್ಲ. ಹೀಗಾಗಿ ಕೋಚ್ ನೇಮಕ ಪ್ರಕ್ರಿಯೆಯನ್ನು ಬಿಸಿಸಿಐ ಹೊಸದಾಗಿ ನಡೆಸಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ವಿಶ್ವಕಪ್ ಮುಕ್ತಾಯಗೊಳ್ಳುತ್ತಿದ್ದಂತೆ ಶಾಸ್ತ್ರಿ ಹಾಗೂ ತಂಡದ ಇನ್ನಿತರ ಕೋಚ್ ಗಳ ಗುತ್ತಿಗೆ ಅವಧಿ ಪೂರ್ಣಗೊಳ್ಳಲಿದೆ. ಬಿಸಿಸಿಐ ಕೋಚ್ ಹುದ್ದೆಗೆ ಹೊಸದಾಗಿ ಜಾಹೀರಾತು ನೀಡಿ, ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಸಂದರ್ಶನ ನಡೆಸಬೇಕಿದೆ. ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು ಅದಕ್ಕೂ ಮುನ್ನ ಕೋಚ್ ನೇಮಕ ನಡೆಯಲಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?