ಐಸಿಸಿ ಮಹಿಳಾ ಏಕದಿನ ಶ್ರೇಯಾಂಕ: ಅಗ್ರ ಸ್ಥಾನದಲ್ಲಿ ಸ್ಮೃತಿ ಮಂಧಾನ, ಝುಲನ್ ಗೋಸ್ವಾಮಿ: ಉಳಿದವರ ವಿವರ ಹೀಗಿದೆ
ದುಬೈ: ಐಸಿಸಿ ಮಹಿಳಾ ಏಕದಿನ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾದ ಇಬ್ಬರು ಆಟಗಾರ್ತಿಯರಾದ ಸ್ಮೃತಿ ಮಂಧಾನ, ಝುಲನ್ ಗೋಸ್ವಾಮಿ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
797 ಅಂಕಗಳೊಂದಿಗೆ ಸ್ಮೃತಿ ಮಂಧಾನ ಏಕದಿನ ಆಟಗಾರ್ತಿಯರ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಡೆದಿದ್ದರೆ, ಗೋಸ್ವಾಮಿ ಬೌಲಿಂಗ್ ವಿಭಾಗದಲ್ಲಿ 730 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. 713 ಅಂಕಗಳ ಮೂಲಕ 4 ನೇ ಸ್ಥಾನದಲ್ಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಐಸಿಸಿ ಪಟ್ಟಿಯಲ್ಲಿ ಮೊದಲ 10 ಆಟಗಾರ್ತಿಯರ ಪೈಕಿ ಇರುವ ಭಾರತದ ಏಕೈಕ ಮಹಿಳಾ ಕ್ರಿಕೆಟಿಗರಾಗಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಭಾರತದ ವೇಗಿ ಶಿಖಾ ಪಾಂಡೆ 688 ಅಂಕಗಳೊಂದಿಗೆ 5 ನೇ ಸ್ಥಾನದಲ್ಲಿದ್ದರೆ ಲೆಗ್ ಸ್ಪಿನ್ನರ್ ಪೂನಮ್ ಯಾದವ್ 656 ಅಂಕಗಳೊಂದಿಗೆ 10 ನೇ ಸ್ಥಾನದಲ್ಲಿದ್ದಾರೆ. ಇನ್ನು ಆಲ್ ರೌಂಡರ್ ದೀಪ್ತಿ ಶರ್ಮಾ ಮೂರನೇ ಸ್ಥಾನವನ್ನು ದಕ್ಷಿಣ ಆಫ್ರಿಕಾದ ಡಿ ವ್ಯಾನ್ ನಿಕೆರ್ಕ್ ಜೊತೆ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos