ಐಪಿಎಲ್:2019: ಆರ್ಸಿಬಿಗೆ ಸಿಎಸ್ಕೆ ಸವಾಲ್, ಟಾಸ್ ಗೆದ್ದ ಸೂಪರ್ ಕಿಂಗ್ಸ್ ಫೀಲ್ಡಿಂಗ್ ಆಯ್ಕೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2019ನೇ ಆವೃತ್ತಿಯ ಚೊಚ್ಚಲ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ....
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2019ನೇ ಆವೃತ್ತಿಯ ಚೊಚ್ಚಲ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಪ್ರಾರಂಭವಾಗಿದ್ದು ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ.
ಚೈನ್ನೈನ ಚಿಪಾಕ್ನ ಎಂ.ಎ ಚಿದಂಬರಂ ಸ್ಟೇಡಿಯಂ ನಲ್ಲಿ ಪಂದ್ಯ ಆಯೋಜನೆಯಾಗಿದ್ದು ಚೆನ್ನೈ ತಂಡದ ನಾಯಕ ಎಂ.ಎಸ್. ಧೋನಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಚಿನ್ನೈ ಸೂಪರ್ ಕಿಂಗ್ಸ್ ಇದಾಗಲೇ ಮೂರು ಬಾರಿ ಚಾಂಪಿಯನ್ ಎನಿಸಿಕೊಂಡಿದ್ದರೆ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಪ್ರಶಸ್ತಿಗಾಗಿ ನಿರೀಕ್ಷಿಸುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.