ಸಂಗ್ರಹ ಚಿತ್ರ 
ಕ್ರಿಕೆಟ್

ಆರ್ ಸಿಬಿ ಅಭಿಮಾನಿಗಳಿಗೆ ಶಾಕ್: ಕ್ಯಾಪ್ಟನ್ ಕೊಹ್ಲಿ ಸಂಪೂರ್ಣ ಐಪಿಎಲ್ ಸರಣಿ ಆಡುತ್ತಿಲ್ಲ!

ಬಹು ನಿರೀಕ್ಷಿತ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ತಂಡದ ನಾಯಕ ವಿರಾಟ್ ಕೊಹ್ಲಿ ಶಾಕ್ ನೀಡಿದ್ದು, ತಾವು ಸಂಪೂರ್ಣ ಟೂರ್ನಿಯಲ್ಲಿ ಆಡದೇ ಇರುವ ಕುರಿತು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಬಹು ನಿರೀಕ್ಷಿತ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ತಂಡದ ನಾಯಕ ವಿರಾಟ್ ಕೊಹ್ಲಿ ಶಾಕ್ ನೀಡಿದ್ದು, ತಾವು ಸಂಪೂರ್ಣ ಟೂರ್ನಿಯಲ್ಲಿ ಆಡದೇ ಇರುವ ಕುರಿತು ಮಾಹಿತಿ ನೀಡಿದ್ದಾರೆ.
ಇಂದಿನಿಂದ ಬಿಸಿಸಿಐನ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಗೆ ಚಾಲನೆ ದೊರೆಯುತ್ತಿದ್ದು, ಚೆನ್ನೈನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಪಂದ್ಯಕ್ಕಾಗಿ ಆರ್ ಸಿಬಿ ಆಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಟೂರ್ನಿ ಆರಂಭಕ್ಕೂ ಮುನ್ನವೇ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬಿಕ್ ಶಾಕ್ ನೀಡಿದ್ದಾರೆ.
ಮೂಲಗಳ ಪ್ರಕಾರ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಲಿ ಐಪಿಎಲ್ ಟೂರ್ನಿಯ ಸಂಪೂರ್ಣ ಸರಣಿಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಟೂರ್ನಿಯ ಕೆಲ ಪಂದ್ಯಗಳಿಂದ ಕೊಹ್ಲಿ ದೂರಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅರೆ ಕೊಹ್ಲಿಗೇನಾಗಿದೆ.. ಎನ್ನಬೇಡಿ. ವಿರಾಟ್ ಕೊಹ್ಲಿ ಈ ಕಠಿಣ ನಿರ್ಧಾರಕ್ಕೆ ಮುಂಬರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯೇ ಕಾರಣ. ಹೌದು ಕೊಹ್ಲಿ ಈ ಮಹತ್ವದ ಟೂರ್ನಿಯಲ್ಲಿ ಪಾಲ್ಗೊಳ್ಳುವ ಸಲುವಾಗಿಯೇ ಐಪಿಎಲ್ ನ ಕೆಲ ಪಂದ್ಯಗಳಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದ್ಜಾರೆ. 
ವಿಶ್ವಕಪ್ ಟೂರ್ನಿಗಾಗಿ ತಮ್ಮ ಫಿಟ್ನೆಸ್ ಕಾಯ್ದುಕೊಳ್ಳಲು ಕೊಹ್ಲಿ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದು, ರೋಚಕತೆಯಿಂದ ಕೂಡಿರುವ ಐಪಿಎಲ್ ಪಂದ್ಯಗಳಿಂದ ತಾವು ಗಾಯಾಳು ಆಗದಂತೆ ಕೊಹ್ಲಿ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಕೊಹ್ಲಿ ಕೇವಲ ತಾವು ಮಾತ್ರವಲ್ಲದೇ ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೂ ಇದೇ ಸಲಹೆ ನೀಡಿದ್ದು, ಫಿಟ್ನೆಸ್ ಕಾಯ್ದುಕೊಳ್ಳುವ ಸಲುವಾಗಿ ಆಗಾಗ ವಿಶ್ರಾಂತಿ ಪಡೆಯಿರಿ ಎಂದು ಸಹ ಆಟಗಾರರಿಗೆ ಸಲಹೆ ಕೂಡ ನೀಡಿದ್ದಾರೆ.
ಇನ್ನು ಐಪಿಎಲ್ ಟೂರ್ನಿಯ ಮುಕ್ತಾಯದ ಬೆನ್ನಲ್ಲೇ ಬಹು ನಿರೀಕ್ಷಿತ ವಿಶ್ವಕಪ್ ಟೂರ್ನಿಕೂಡ ಆರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್