ರಿಷಬ್ ಪಂತ್ 
ಕ್ರಿಕೆಟ್

ಟೀಂ ಇಂಡಿಯಾ ಆಟಗಾರನಾಗಿ ಠುಸ್, ಆದರೆ ಐಪಿಎಲ್ ಮಾತ್ರ ರಿಷಬ್ ಪಂತ್ ಪರಾಕ್ರಮ!

ಮಾಜಿ ನಾಯಕ ಎಂಎಸ್ ಧೋನಿಗೆ ಬದಲಿ ಆಟಗಾರ ಭವಿಷ್ಯದ ವಿಕೆಟ್ ಕೀಪರ್ ಎಂದೆಲ್ಲ ಗುರುತಿಸಿಕೊಂಡಿದ್ದ ರಿಷಬ್ ಪಂತ್ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಾಗ ಕಳಪೆ ಪ್ರದರ್ಶನ...

ಮುಂಬೈ: ಮಾಜಿ ನಾಯಕ ಎಂಎಸ್ ಧೋನಿಗೆ ಬದಲಿ ಆಟಗಾರ ಭವಿಷ್ಯದ ವಿಕೆಟ್ ಕೀಪರ್ ಎಂದೆಲ್ಲ ಗುರುತಿಸಿಕೊಂಡಿದ್ದ ರಿಷಬ್ ಪಂತ್ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಾಗ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ಆದರೆ ಐಪಿಎಲ್ ನಲ್ಲಿ ಮಾತ್ರ ಸ್ಫೋಟಕ ಬ್ಯಾಟಿಂಗ್ ಮಾಡುತ್ತಾ ತಮ್ಮ ಪರಾಕ್ರಮವನ್ನು ತೋರಿಸಿದ್ದಾರೆ.
ಹೌದು, ಟೀಂ ಇಂಡಿಯಾ ಪರ ಐದು ಏಕದಿನ ಪಂದ್ಯಗಳನ್ನು ಆಡಿರುವ ರಿಷಬ್ ಪಂತ್ ಕೇವಲ 93 ರನ್ ಗಳಿಸಿದ್ದಾರೆ. ಇನ್ನು 15 ಅಂತಾರಾಷ್ಟ್ರೀಯ ಟಿ20 ಪೈಕಿ 19.41ರ ಸರಾಸರಿಯಲ್ಲಿ 233 ರನ್ ಪೇರಿಸಿದ್ದಾರೆ. ಆದರೆ ಐಪಿಎಲ್ ನಲ್ಲಿ ಮಾತ್ರ ರಿಷಬ್ ಪಂತ್ ಆಡಿರುವ 14 ಪಂದ್ಯಗಳ ಪೈಕಿ 684 ರನ್ ಗಳಿಸಿದ್ದಾರೆ.
ನಿನ್ನೆ ನಡೆದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ಪರ ಆಡಿದ್ದ ರಿಷಬ್ ಪಂತ್ 27 ಎಸೆತಗಳಲ್ಲೇ 7 ಸಿಕ್ಸರ್ ಹಾಗೂ 7 ಬೌಂಡರಿ ನೆರವಿನಿಂದ 78 ರನ್ ಪೇರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಐಪಿಎಲ್ ನಲ್ಲಿ ವಿಜೃಂಬಿಸುವ ರಿಷಬ್ ಪಂತ್ ರಾಷ್ಟ್ರೀಯ ತಂಡದಲ್ಲಿ ಆಡುವಾಗ ಮಾತ್ರ ಕಳಪೆ ಪ್ರದರ್ಶನ ನೀಡುತ್ತಿರುವುದು ಆಯ್ಕೆಗಾರರಿಗೆ ತಲೆನೋವಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ