ಮಾಜಿ ಆಸ್ಟ್ರೇಲಿಯಾ ಸ್ಪಿನ್ನರ್ ಬ್ರೂಸ್ ಯಾರ್ಡ್ಲಿ ನಿಧನ
ಆಸ್ಟ್ರೇಲಿಯಾದ ಮಾಜಿ ಆಫ್ ಸ್ಪಿನ್ನರ್ ಬ್ರೂಸ್ ಯಾರ್ಡ್ಲಿ ಬುಧವಾರ ಬೆಳಗ್ಗೆ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು....
ನವದೆಹಲಿ: ಆಸ್ಟ್ರೇಲಿಯಾದ ಮಾಜಿ ಆಫ್ ಸ್ಪಿನ್ನರ್ ಬ್ರೂಸ್ ಯಾರ್ಡ್ಲಿ ಬುಧವಾರ ಬೆಳಗ್ಗೆ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎಂದು ಆಸ್ಟ್ರೇಲಿಯಾದ ಕ್ರಿಕೆಟ್ ಸಂಸ್ಥೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಯಾರ್ಡ್ಲಿ 1978 ರಿಂದ 1983ರವರೆಗೆ 33 ಟೆಸ್ಟ್ ಹಾಗೂ ಏಳು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಗಡಿದ್ದರು.
ವೆಸ್ಟ್ ಇಂಡೀಸ್ ವಿರುದ್ಧ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ 1982ರಲ್ಲಿ ನಡೆದ ಪಂದ್ಯದಲ್ಲಿ 10 ವಿಕೆಟ್ ಪಡೆದಿದ್ದರು. ಒಟ್ಟಾರೆ 126 ವಿಕೆಟ್ ಪಡೆದಿದ್ದರು.
ಮಧ್ಯಮ ವೇಗದ ಬೌಲರ್ ಆಗಿ ವೃತ್ತಿ ಜೀವನ ಆರಂಭಿಸಿದ್ದ ಅವರು ನಂತರ ಆಫ್ ಸ್ಪಿನ್ನರ್ ಬೌಲರ್ ಆದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.