ಐಪಿಎಲ್ 2019: ಮುಂಬೈ ವಿರುದ್ಧ ಟಾಸ್ ಗೆದ್ದ ಕೊಹ್ಲಿ ಪಡೆ ಫಿಲ್ಡಿಂಗ್ ಆಯ್ಕೆ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ - ಐಪಿಎಲ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೀಲ್ಡಿಂಗ್ ಆಯ್ದುಕೊಂಡಿದೆ. ವಿರಾಟ್ ಕೊಹ್ಲಿ ನಾಯಕತ್ವದ ಆರ್‌ಸಿಬಿಗೆ ಇದು ಮೊದಲ ಹೋಂ ಪಿಚ್ ಪಂದ್ಯವಾಗಿದ್ದು ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲು ಸಿದ್ದವಾಗಿದೆ.
ಬೆಂಗಳೂರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು ಸರಣಿಯ ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ಧ ಹೀನಾಯ ಸೋಲು ಕಂಡಿದ್ದ ಕೊಹ್ಲಿ ಬಳಗಕ್ಕೆ ಇಂದು ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಇನ್ನು ಮುಂಬೈ ಇಂಡಿಯನ್ಸ್ ತಂಡ ಸಹ ಡೆಲ್ಲಿ ಕ್ಯಾಪಿಟಲ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಸೋಲಿನ ಆಘಾತ ಅನುಭವಿಸಿದೆ. ಹೀಗಾಗಿ ಎರಡೂ ತಂಡಗಳಿಗೆ ಈ ಪಂದ್ಯ ಮಹತ್ವದಾಗಿ ಪರಿಣಮಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics