ಮುಂದಿನ ಸಲ ಕಪ್ ನಮ್ದೇ! ಈ ಬಾರಿಮಳೆಯಲ್ಲಿ ಕೊಚ್ಚಿಹೋದ ಆರ್ ಸಿಬಿ ಪ್ಲೇ ಆಫ್ ಕನಸು! 
ಕ್ರಿಕೆಟ್

ಮುಂದಿನ ಸಲ ಕಪ್ ನಮ್ದೇ! ಈ ಬಾರಿಮಳೆಯಲ್ಲಿ ಕೊಚ್ಚಿಹೋದ ಆರ್ ಸಿಬಿ ಪ್ಲೇ ಆಫ್ ಕನಸು!

ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ತಂಡದ ಇತ್ತೀಚಿನ ಗೆಲುವುಗಳಿಂದ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿತ್ತು. ಆದರೆ ಮೇ.30 ರಂದು ನಡೆದ ಪಂದ್ಯದಲ್ಲಿ ಮಳೆ ನೀರಿನಲ್ಲಿ ಆರ್ ಸಿಬಿ ಪ್ಲೇ ಆಫ್ ಕನಸು ಕೊಚ್ಚಿಹೋಯಿತು.

ಬೆಂಗಳೂರು: ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ತಂಡದ ಇತ್ತೀಚಿನ ಗೆಲುವುಗಳಿಂದ ಪ್ಲೇ ಆಫ್ ಕನಸನ್ನು  ಜೀವಂತವಾಗಿರಿಸಿಕೊಂಡಿತ್ತು. ಆದರೆ ಮೇ.30 ರಂದು ನಡೆದ ಪಂದ್ಯದಲ್ಲಿ ಮಳೆ ನೀರಿನಲ್ಲಿ ಆರ್ ಸಿಬಿ ಪ್ಲೇ ಆಫ್ ಕನಸು ಕೊಚ್ಚಿಹೋಯಿತು. 
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ-ಆರ್ ಆರ್ ನಡುವಿನ ಪಂದ್ಯ ಮಳೆಯ ಕಾರಣದಿಂದಾಗಿ ತಲಾ 5 ಓವರ್ ಗಳಿಗೆ ಇಳಿಕೆ  ಮಾಡಲಾಯಿತು. ನಿಗದಿತ 5 ಓವರ್ ಗಳಲ್ಲಿ ಆರ್ ಸಿಬಿ 7 ವಿಕೆಟ್ ಕಳೆದುಕೊಂಡು ಎದುರಾಳಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ 63 ರನ್ ಗಳ ಟಾರ್ಗೆಟ್ ನೀಡಿತ್ತು. ಆರ್ ಸಿಬಿ ಟಾರ್ಗೆಟ್ ನ್ನು ಬೆನ್ನಟ್ಟಿದ್ದ ರಾಜಸ್ಥಾನ್ ರಾಯಲ್ಸ್ ತಂಡ ಒಂದು ವಿಕೆಟ್ ನಷ್ಟಕ್ಕೆ 3.2 ಓವರ್ ಗಳಲ್ಲಿ 41 ರನ್ ಗಳಿಸಿತ್ತು. 
ಪಂದ್ಯ ನಿರ್ಣಾಯಕ ಹಂತದಲ್ಲಿರುವಾಗ ಮತ್ತೆ ಮಳೆ ಪ್ರಾರಂಭವಾದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು. ಅಷ್ಟೇ ಅಲ್ಲದೇ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ಹಂಚಲಾಯಿತು. ಆರ್ ಸಿಬಿ ಪ್ಲೇ ಆಫ್ ಕನಸು ನನಸಾಗಬೇಕಿದ್ದರೆ ಈ ಪಂದ್ಯವನ್ನು ಗೆಲ್ಲಲೇಬೇಕಾಗಿತ್ತು. 13 ಪಂದ್ಯಗಳ ಪೈಕಿ 4 ರಲ್ಲಿ ಗೆದ್ದು ಒಂದರಲ್ಲಿ ಅಂಕಗಳನ್ನು ಹಂಚಿಕೊಂಡಿರುವ ಆರ್ ಸಿಬಿ 9 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ. ಇನ್ನುರಾಜಸ್ಥಾನ ರಾಯಲ್ಸ್ 11 ಅಂಕ ಗಳಿಸಿ 5 ನೇ ಸ್ಥಾನಕ್ಕೆ ಜಿಗಿದಿದ್ದು, ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT