ವೇದಾ ಕೃಷ್ಣಮೂರ್ತಿ 
ಕ್ರಿಕೆಟ್

ಹಸೆಮಣೆ ಏರಲು ತಯಾರಾದ ಟೀಂ ಇಂಡಿಯಾ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.

ಬೆಂಗಳೂರು: ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ. 
ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುವ ಯುವಕನ ಫೋಟೋವನ್ನು ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ.
ಪ್ರಸಕ್ತ ಸಾಲಿನಲ್ಲಿ ಚೊಚ್ಚಲ ಮಹಿಳಾ ಐಪಿಎಲ್ ತಂಡದಲ್ಲಿ ಭಾಗವಹಿಸುತ್ತಿರುವ ವೇದಾ , ಮೇ6ರಿಂದ 11ರವರೆಗೆ ಜೈಪುರದಲ್ಲಿ ನಡೆಯಲಿರುವ ಕ್ರಿಕೆಟ್ ಸರಣಿಯಲ್ಲಿ ಮಿಥಾಲಿ ರಾಜ್ ನಾಯಕತ್ವದ ವೆಲಾಸಿಟಿ ತಂಡದ ಪರ ಆಡಲಿದ್ದಾರೆ.
48 ಅಂತರಾಷ್ಟ್ರೀಯ ಪಂದ್ಯಗಳಿಂದ ಎಂಟು ಅರ್ಧ ಶತಕ, 829 ರನ್ ಗಳಿಸಿದ್ದರೆ 59 ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 686 ರನ್ ಗಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT