ಐಪಿಎಲ್ 2019 ಫೈನಲ್ : ಮೈಕೆಲ್ ವಾಘನ್ ಊಹೆ, ಮಹಾ ಕಾಳಗದಲ್ಲಿ ಗೆಲ್ಲೋರು ಯಾರು?
ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ 12 ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬುದನ್ನು ಇಂಗ್ಲೆಂಡ್ ತಂಡದ ಮಾಜಿ ಕ್ಯಾಪ್ಟನ್ ಮೈಕೆಲ್ ವಾಘನ್ ಊಹಿಸಿದ್ದಾರೆ.
ಹೈದ್ರಾಬಾದ್ : ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ 12 ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬುದನ್ನು ಇಂಗ್ಲೆಂಡ್ ತಂಡದ ಮಾಜಿ ಕ್ಯಾಪ್ಟನ್ ಮೈಕೆಲ್ ವಾಘನ್ ಊಹಿಸಿದ್ದಾರೆ.
ಈ ಆವೃತ್ತಿಯಲ್ಲಿ ಈಗಾಗಲೇ ಮೂರು ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಸೋಲಿಸಿರುವ ಮುಂಬೈ ಇಂಡಿಯನ್ಸ್ ನಾಲ್ಕನೇ ಬಾರಿ ಗೆಲ್ಲುವ ಫೇವರಿಟ್ ತಂಡವಾಗಿದೆ. ಲೀಗ್ ಹಂತದಲ್ಲಿ ಎರಡು ಹಾಗೂ ಕ್ವಾಲಿಫೈಯರ್ ಹಂತದ ಒಂದು ಹಂತದಲ್ಲಿ ಸಿಎಸ್ ಕೆ ಸೋತಿದೆ.2016ರ ಚಾಂಪಿಯನ್ಸ್ ಸನ್ ರೈಸರ್ಸ್ ಹೈದ್ರಾಬಾದ್ ತವರು ನೆಲದಲ್ಲಿ ಸಿಎಸ್ ಕೆ ಗಿಂತಲೂ ಮುಂಬೈ ಇಂಡಿಯನ್ಸ್ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ಸಲಹೆ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.