ಲಂಡನ್: ಐಸಿಸಿ ವಿಶ್ವಕಪ್ ಗೆ ಮುನ್ನ ಶನಿವಾರ ಓವಲ್ ಅಂಗಳದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ.
ಇಂದು ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ವಿರುದ್ಧ ನ್ಯೂಜಿಲೆಂಡ್ ಆರು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ರವೀಂದ್ರ ಜಡೇಜಾ ಅರ್ಧಶತಕದ (54) ಹೊರತಾಗಿಯೂ 179 ರನ್‌ಗಳಿಗೆ ಸರ್ವಪತನ ಕಂಡಿತ್ತು. ಬಳಿಕ ಗುರಿ ಬೆನ್ನಟ್ಟಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ (67) ಹಾಗೂ ರಾಸ್ ಟೇಲರ್ (71) ಅರ್ಧಶತಕದ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು.
ಅಭ್ಯಾಸ ಪಂದ್ಯದ ಸೋಲಿನ ಬಳಿಕ ಟೀಂ ಇಂಡಿಯಾ ತನ್ನಲ್ಲಿನ ಹಲವು ನ್ಯೂನತೆಗಳನ್ನು ಹುಡುಕಿ ಸರಿಪಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics