ಮೊಹಮದುಲ್ಲಾ 
ಕ್ರಿಕೆಟ್

ಟಿ-20 ಸರಣಿಗಳು ಯುವ ಆಟಗಾರರಿಗೆ ಉತ್ತಮ ಅವಕಾಶ- ಮೊಹಮದುಲ್ಲಾ

ಯುವ ಆಟಗಾರರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಟಿ- 20 ಸರಣಿಗಳು ಉತ್ತಮ ಅವಕಾಶ ಎಂದು ಬಾಂಗ್ಲಾದೇಶ ನಾಯಕ ಮೊಹಮದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ:  ಯುವ ಆಟಗಾರರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಟಿ- 20 ಸರಣಿಗಳು ಉತ್ತಮ ಅವಕಾಶ ಎಂದು ಬಾಂಗ್ಲಾದೇಶ ನಾಯಕ ಮೊಹಮದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಭಾರತ ವಿರುದ್ಧ ನಾಳೆ ನಡೆಯಲಿರುವ ಟಿ-20 ಸರಣಿ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯವನ್ನು   ಗೆಲ್ಲುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುವುದು, ಬಾಂಗ್ಲಾದೇಶದ ಆಟಗಾರರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ಉತ್ತಮ ಅವಕಾಶವಾಗಿದೆ ಎಂದರು.

ನಮ್ಮ ಆಟಗಾರರ ಬಗ್ಗೆ ನಮಗೆ ವಿಶ್ವಾಸವಿದೆ. ಉತ್ತಮ ರೀತಿಯಲ್ಲಿ ಆಡಲಿದ್ದಾರೆ ಎಂಬ ಭರವಸೆ ಹೊಂದಿದ್ದೇವೆ. ಅಂತಾರಾಷ್ಟ್ರೀಯ ಪಂದ್ಯ ಆಡಬೇಕಾದರೆ ಒತ್ತಡ ಇದ್ದೇ ಯಾವಾಗಲೂ ಇದ್ದೇ ಇರುತ್ತದೆ. ಅಮ್ ಅಮಿನ್ ಮರಳಿರುವುದು ಖುಷಿಯಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದರು.

ಈ ಮಧ್ಯೆ ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಪ್ರಮಾಣ ತೀವ್ರಗೊಂಡಿದ್ದು, ನವೆಂಬರ್ 5ರವರೆಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಕಟ್ಟಡ ಕಾಮಗಾರಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮೊಹಮದುಲ್ಲಾ, ವಾತಾವಾರಣಕ್ಕೆ ಹೊಂದಿಕೊಳ್ಳಲು ಆಟಗಾರರು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT