ಶಿವಂ ದುಬೆ 
ಕ್ರಿಕೆಟ್

ಶಿವಂ ದುಬೆ ಮುಂದಿನ ಯುವರಾಜ್ ಸಿಂಗ್? ಬಿಸಿಸಿಐ ವಿಡಿಯೋಗೆ ಫ್ಯಾನ್ಸ್ ಪಿಧಾ!

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದ ಮೂಲಕ ಶಿವಂ ದುಬೆ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ.

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದ ಮೂಲಕ ಶಿವಂ ದುಬೆ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ.

ದೇಶಿಯ ಕ್ರಿಕೆಟ್ ನಲ್ಲಿ ಉತ್ತಮ ಆಟ ಪ್ರದರ್ಶಿಸಿರುವ ದುಬೆ, ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ-20 ಪಂದ್ಯವನ್ನಾಡುತ್ತಿರುವಂತೆ ಬಿಸಿಸಿಐ ಶೇರ್ ಮಾಡಿರುವ ಅವರ ಪ್ರಾಕ್ಟೀಸ್ ಅವಧಿಯ ವಿಡಿಯೋಗೆ ಕ್ರಿಕೆಟ್ ಅಭಿಮಾನಿಗಳು ಮನಸೋತಿದ್ದಾರೆ.

ಪ್ರಾಕ್ಟೀಸ್ ವೇಳೆಯಲ್ಲಿ ಕೆಲವು ಶಾಟ್ ಗಳನ್ನು ಎತ್ತಿದ್ದು, ಅವರ ಬ್ಯಾಕ್ ಲಿಪ್ಟ್  ಮಾಜಿ ಟೀ ಇಂಡಿಯಾ ಆಲ್ ರೌಂಡರ್ ಯುವರಾಜ್ ಸಿಂಗ್ ಅವರ ಆಟಕ್ಕೆ ಹೋಲಿಕೆಯಾಗುತ್ತಿದೆ. ಶಿವಂ ದುಬೆ ಮುಂದಿನ ಯುವರಾಜ್ ಸಿಂಗ್ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯುವರಾಜ್ ಸಿಂಗ್ ಕೂಡಾ ಕೆಲವು ವೇಳೆಯಲ್ಲಿ ಬೌಲಿಂಗ್ ಮಾಡುತ್ತಿದ್ದರು. ಅದರಂತೆ ಆಲ್ ರೌಂಡರ್ ದುಬೆ ಸ್ಪೀನ್ ಬೌಲ್ ಕೂಡಾ ಮಾಡಬಲ್ಲವರಾಗಿದ್ದು, ಅವರ ನೆಟ್ ಅಭ್ಯಾಸಕ್ಕೆ ಕ್ರಿಕೆಟ್ ಅಭಿಮಾನಿಗಳು ಮನಸೋತಿದ್ದಾರೆ.

ಮುಂಬೈನ ಆಲ್ ರೌಂಡರ್ ಶಿವಂ ದುಬೆ 2018ರಲ್ಲಿ ನಡೆದ ರಣಜಿ ಟ್ರೋಫಿಯಲ್ಲಿ ಐದು ಎಸೆತಗಳಲ್ಲಿ ಐದು ಸಿಕ್ಸರ್ ಸಿಡಿಸುವ ಮೂಲಕ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗೆ 5 ಕೋಟಿ ಗೆ  ಖರೀದಿಯಾಗಿದ್ದರು.  ಆದರೆ 2019ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!