ಸಂಗ್ರಹ ಚಿತ್ರ 
ಕ್ರಿಕೆಟ್

ಕಿಂಗ್ ಕೊಹ್ಲಿಗೆ 31ನೇ ಜನ್ಮದಿನ ಸಂಭ್ರಮ, ಅಭಿನಂದನೆಗಳ ಮಹಾಪೂರ!

ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಜನ್ಮದಿನದ ಸಂಭ್ರಮದಲ್ಲಿದ್ದು, ಅವರು ಮಂಗಳವಾರ 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಜನ್ಮದಿನದ ಸಂಭ್ರಮದಲ್ಲಿದ್ದು, ಅವರು ಮಂಗಳವಾರ 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 

ಹುಟ್ಟುಹಬ್ಬದ ಅಂಗವಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಐಸಿಸಿ), ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ), ಹಿರಿಯ ಕ್ರಿಕೆಟಿಗರು ಸೇರಿದಂತೆ ಹಲವು ಕ್ರೀಡಾಭಿಮಾನಿಗಳು ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.  

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ಪ್ರವಾಸ ಸರಣಿಯಿಂದ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಸದ್ಯ ವಿಶ್ರಾಂತಿಯಲ್ಲಿರುವ ಕೊಹ್ಲಿ, ನವೆಂಬರ್ 14ರಂದು ನಡೆಯಲಿರುವ ಬಾಂಗ್ಲಾ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯಕ್ಕೆ ತಂಡ ಸೇರಿಕೊಳ್ಳಲಿದ್ದಾರೆ. 

ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 20 ಸಾವಿರ ರನ್‌ ಗಳಿಕೆ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ದ್ವಿಶತಕ ಗಳಿಸಿದ ಆಟಗಾರ ಎಂಬ ದಾಖಲೆ ಕೊಹ್ಲಿ ಹೆಸರಲ್ಲಿದೆ. ಅಲ್ಲದೆ ಐಸಿಸಿ ನೀಡುವ ಎಲ್ಲ ಪ್ರಶಸ್ತಿಗಳನ್ನೂ ಬಾಚಿಕೊಂಡ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ