ಶೇನ್ ವಾಟ್ಸನ್ 
ಕ್ರಿಕೆಟ್

ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಶೇನ್ ವ್ಯಾಟ್ಸನ್ ನೇಮಕ

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಲ್‍ರೌಂಡರ್ ಶೇನ್ ವ್ಯಾಟ್ಸನ್ ಅವರು "ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್" (ಎಸಿಎ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಲ್‍ರೌಂಡರ್ ಶೇನ್ ವ್ಯಾಟ್ಸನ್ ಅವರು "ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್" (ಎಸಿಎ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಸೋಮವಾರ ರಾತ್ರಿ ಎಸಿಎ ಎಜಿಎಂನಲ್ಲಿ ನಡೆದಿದ್ದ ಸಭೆಯಲ್ಲಿ ವ್ಯಾಟ್ಸನ್ ಅವರನ್ನು ನೇಮಕ ಮಾಡಲಾಗಿದೆ. 10 ಸದಸ್ಯರೊನ್ನೊಳಗೊಂಡ ಮಂಡಳಿಯಲ್ಲಿ ಶೇನ್ ವ್ಯಾಟ್ಸನ್ ಒಂದು ಭಾಗವಾಗಿದ್ದಾರೆ. ಮಂಡಳಿಯಲ್ಲಿ ಮೂವರು ಹಾಲಿ ಮತ್ತು ಮಾಜಿ ಕ್ರಿಕೆಟಿಗರನ್ನು ಹೊಸದಾಗಿ ನೇಮಿಸಲಾಗಿದೆ. ಆಸ್ಟ್ರೇಲಿಯಾ ತಂಡದ ಆಟಗಾರರಾದ ಪ್ಯಾಟ್ ಕಮಿನ್ಸ್ ಹಾಗೂ ಕ್ರಿಸ್ಟೆನ್ ಬೀಮ್ಸ್ ಮತ್ತು ಕ್ರಿಕೆಟ್ ವಿಶ್ಲೇಷಣಾಕಾರ ಮತ್ತು ಮಾಜಿ ಆಸ್ಟ್ರೇಲಿಯನ್ ಕ್ರಿಕೆಟಿಗ ಲಿಸಾ ಸ್ಟ್ಯಾಲೇಕರ್ ಒಳಗೊಂಡಿದ್ದಾರೆ.

"ಭವಿಷ್ಯದಲ್ಲಿ ವಿಕಸನಗೊಳ್ಳಲಿರುವ ಎಸಿಎಯ ಅಧ್ಯಕ್ಷರಾಗಿ ನೇಮಕವಾಗಿರುವುದು ನಿಜಕ್ಕೂ ಹೆಮ್ಮೆ ಎನಿಸಿದೆ. ಈ ಹಿಂದೆ ಈ ಅಧಿಕಾರವನ್ನು ನಿರ್ವಹಿಸಿದ್ದ ಹಾದಿಯಲ್ಲೇ ಕಾರ್ಯನಿರ್ವಹಿಸಲು ಉತ್ಸುಕನಾಗಿದ್ದೇನೆ. ಕ್ರಿಕೆಟ್‍ಗೆ ಮತ್ತೊಂದು ಆಯಾಮದಲ್ಲಿ ಕೊಡುಗೆ ನೀಡಲು ಅವಕಾಶ ಸಿಕ್ಕಿರುವುದು ನನ್ನಲ್ಲಿ ಇನ್ನಷ್ಟು ಉತ್ಸಾಹ ತಂದಿದೆ." ಎಂದು ಶೇನ್ ವ್ಯಾಟ್ಸ್‍ನ್ ಹರ್ಷ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT