ಮಾಯಾಂಕ್ ಅಗರ್ ವಾಲ್, ಗವಾಸ್ಕರ್ 
ಕ್ರಿಕೆಟ್

ಮಾಯಾಂಕ್ ಅಗರ್ ವಾಲ್ ಪರ ಸುನೀಲ್ ಗವಾಸ್ಕರ್ ಬ್ಯಾಟಿಂಗ್ 

ಆಡಿರುವ ಎಂಟು ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ತೋರಿರುವ ಮಯಾಂಕ್ ಅಗರ್ವಾಲ್ ಅವರು ಮುಂದಿನ ವರ್ಷವೂ ತನ್ನ ಬ್ಯಾಟಿಂಗ್ ಲಯ ಮುಂದುವರಿಸಲಿದ್ದಾರೆಂದು ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್‌ರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂಬೈ: ಆಡಿರುವ ಎಂಟು ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ತೋರಿರುವ ಮಯಾಂಕ್ ಅಗರ್ವಾಲ್ ಅವರು ಮುಂದಿನ ವರ್ಷವೂ ತನ್ನ ಬ್ಯಾಟಿಂಗ್ ಲಯ ಮುಂದುವರಿಸಲಿದ್ದಾರೆಂದು ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್‌ರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಬಾಂಗ್ಲಾದೇಶ ವಿರುದ್ಧದ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ 243 ರನ್ ಗಳಿಸಿದ್ದರು. ಇದು ಅವರ ವೃತ್ತಿ ಜೀವನದ ವೈಯಕ್ತಿಕ ಅತಿ ಹೆಚ್ಚು ರನ್ ಆಗಿತ್ತು. ಇವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಭಾರತ ಇನಿಂಗ್ಸ್‌ ಹಾಗೂ 130 ರನ್ ಗಳಿಂದ ಜಯ ಸಾಧಿಸಿತ್ತು. 

ಇತ್ತೀಚೆಗೆ ಬಿಡುಗಡೆಯಾಗಿದ್ದ ಟೆಸ್ಟ್ ಬ್ಯಾಟಿಂಗ್  ಶ್ರೇಯಾಂಕದಲ್ಲಿ ಮಯಾಂಕ್ 11ನೇ ಸ್ಥಾನ ಪಡೆಯುವ ಮೂಲಕ ವೃತ್ತಿ ಜೀವನದ ಶ್ರೇಷ್ಠ ಕ್ರಮಾಂಕ ಪಡೆದಿದ್ದಾರೆ.

‘‘ ಮಯಾಂಕ್ ಅಗರ್ವಾಲ್ ಟೆಸ್ಟ್‌ ಕ್ರಿಕೆಟ್ ತುಂಬಾ ಆಹ್ಲಾದಿಸುತ್ತಿದ್ದಾರೆ. ಮೊದಲನೇ ವರ್ಷದಂತೆ ಎರಡನೇ ವರ್ಷವೂ ಅದೇ ಬ್ಯಾಟಿಂಗ್ ಮುಂದುವರಿಸಲಿದ್ದಾರೆಂಬ ನಂಬಿಕೆ ಇದೆ. ಬಲಗೈ ಆರಂಭಿಕನ ಬಗ್ಗೆ ಎರಡನೇ ವರ್ಷ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಆದರೆ, ಸದ್ಯ ಅವರು ಅತ್ಯುತ್ತಮ ಬ್ಯಾಟಿಂಗ್ ಮಾಡುತ್ತಿದ್ದಾರೆ.’’ ಎಂದು ಸ್ಟಾರ್ ಸ್ಪೋರ್ಟ್ಸ್‌ ವಾಹಿನಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

'ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆ ಮಾಡುವ ಉದ್ದೇಶ ನನಗಿಲ್ಲ': ಪೋಪ್ ಲಿಯೋ XIV

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

SCROLL FOR NEXT