ಶೇಖ್ ಹಸೀನಾ-ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಐತಿಹಾಸಿಕ ಹಗಲು ರಾತ್ರಿ ಟೆಸ್ಟ್: ಬಾಂಗ್ಲಾ ಬ್ಯಾಟಿಂಗ್, ಪಂದ್ಯ ವೀಕ್ಷಿಸಲು ಬಾಂಗ್ಲಾ ಪ್ರಧಾನಿ ಆಗಮನ!

ಭಾರತ ಮತ್ತು ಬಾಂಗ್ಲಾದೇಶ ನಡುವೆ ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಪಂದ್ಯ ವೀಕ್ಷಿಸಲು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಢಾಕಾದಿಂದ ವಿಶೇಷ ವಿಮಾನದ ಮೂಲಕ ಕೋಲ್ಕತ್ತಾಗೆ ಆಗಮಿಸಿದ್ದಾರೆ.

ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಪಂದ್ಯ ವೀಕ್ಷಿಸಲು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಢಾಕಾದಿಂದ ವಿಶೇಷ ವಿಮಾನದ ಮೂಲಕ ಕೋಲ್ಕತ್ತಾಗೆ ಆಗಮಿಸಿದ್ದಾರೆ.

ಇಂದು ಈಡನ್ ಗಾರ್ಡನ್‌ನಲ್ಲಿ ಗುಲಾಬಿ ಚೆಂಡಿನೊಂದಿಗೆ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಹಾಜರಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಆಹ್ವಾನ ನೀಡಿದ್ದರು.

ಹಸೀನಾ ಮತ್ತು ಅವರ ಪರಿವಾರ, ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಎಚ್‌ಎಸ್‌ಐಎ) ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 10.15 ಕ್ಕೆ ಕೋಲ್ಕತ್ತಾಕ್ಕೆ ಹೊರಟಿತು ಎಂದು ಡೈಲಿ ಸ್ಟಾರ್ ವರದಿ ಮಾಡಿದೆ.

ವಿಮಾನವು ಕೋಲ್ಕತ್ತಾದ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 10:40 ಕ್ಕೆ (ಭಾರತೀಯ ಸಮಯ) ಬಂದು ಇಳಿದಿದೆ.

ಬಾಂಗ್ಲಾದೇಶದ ಪ್ರಧಾನಿ ಮಧ್ಯಾಹ್ನ 12.30 ಕ್ಕೆ (ಸ್ಥಳೀಯ ಕಾಲಮಾನ) ಈಡನ್ ಗಾರ್ಡನ್ಸ್ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಟೆಸ್ಟ್ ಪಂದ್ಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಆರಂಭಿಕ ಆಘಾತ ಎದುರಾಗಿದೆ. ಬಾಂಗ್ಲಾದೇಶ 17 ರನ್ ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT