ಸುನೀಲ್ ಗವಾಸ್ಕರ್-ಕೊಹ್ಲಿ 
ಕ್ರಿಕೆಟ್

ದಾದಾ ಜಪ ಮಾಡಿದ ಕೊಹ್ಲಿ ವಿರುದ್ಧ ಕಿಡಿಕಾರಿದ ಸುನೀಲ್ ಗವಾಸ್ಕರ್!

ಐತಿಹಾಸಿಕ ಹಗಲು ರಾತ್ರಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ನಂತರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಜಪ ಮಾಡಿದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ.

ಮುಂಬೈ: ಐತಿಹಾಸಿಕ ಹಗಲು ರಾತ್ರಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ನಂತರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಜಪ ಮಾಡಿದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ. 

ತಂಡದ ಗೆಲುವಿನ ನಂತರ ಮಾತನಾಡಿದ್ದ ವಿರಾಟ್ ಕೊಹ್ಲಿ ಅವರು, ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಗೆಲುವಿನ ಸಂಸ್ಕೃತಿಯನ್ನು ಹುಟ್ಟುಹಾಕಿದ್ದು ಅದನ್ನು ನಾವು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದ್ದರು. 

ಈ ಹೇಳಿಕೆಯಿಂದ ಆಕ್ರೋಶಕೊಂಡಿರುವ ಸುನೀಲ್ ಗವಾಸ್ಕರ್, 1970, 1980ರ ವೇಳೆಯಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು ಇದನ್ನು ಮರೆಯಬಾರದು ಎಂದು ಕೊಹ್ಲಿಗೆ ತಿರುಗೇಟು ನೀಡಿದ್ದಾರೆ. 

ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವುದು ಸತ್ಯ. ಆದರೆ ನಾನೊಂದು ವಿಷಯವನ್ನು ಹೇಳಲಬೇಕು. ಈ ಗೆಲುವಿನ ಪಯಣ ಶುರವಾಗಿದ್ದು ದಾದಾ ಟೀಂ ನಿಂದ ಎಂದು ಹೇಳಿದ್ದಾರೆ. ಸದ್ಯ ಸೌರವ ಗಂಗೂಲಿ ಬಿಸಿಸಿಐ ಅಧ್ಯಕ್ಷರು ಎಂದು ಎಲ್ಲರಿಗೂ ಗೊತ್ತು. ಇದೇ ಕಾರಣಕ್ಕೆ ಅವರನ್ನು ಹೊಗಳಿ ಕೊಹ್ಲಿ ಮಾತನಾಡಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ