ಐಸಿಸಿ ಟೆಸ್ಟ್‌ ಶ್ರೇಯಾಂಕ: ಅಗ್ರ ಸ್ಥಾನದ ಸನಿಹದಲ್ಲಿ ವಿರಾಟ್ ಕೊಹ್ಲಿ 
ಕ್ರಿಕೆಟ್

ಐಸಿಸಿ ಟೆಸ್ಟ್‌ ಶ್ರೇಯಾಂಕ: ಅಗ್ರ ಸ್ಥಾನದ ಸನಿಹದಲ್ಲಿ ವಿರಾಟ್ ಕೊಹ್ಲಿ

ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಹೊನಲು-ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ ಮಂಗಳವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ನಡುವಿನ ಅಂತರ ಕಡಿಮೆ ಮಾಡಿಕೊಂಡಿದ್ದಾರೆ.

ದುಬೈ: ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಹೊನಲು-ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಂಗಳವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ನಡುವಿನ ಅಂತರ ಕಡಿಮೆ ಮಾಡಿಕೊಂಡಿದ್ದಾರೆ. ಕಳೆದ ಸರಣಿಯಲ್ಲಿ ಸಂಘಟಿತ ಪ್ರದರ್ಶನ ತೋರಿದ ಕನ್ನಡಿಗ ಮಯಾಂಕ್ ಅಗರ್ವಾಲ್ ಅಗ್ರ 10ರೊಳಗೆ ಚೊಚ್ಚಲ ಪದಾರ್ಪಣೆ ಮಾಡಿದ್ದಾಾರೆ. ಇದರೊಂದಿಗೆ ವೃತ್ತಿ ಜೀವನದ ಶ್ರೇಷ್ಠ  ಶ್ರೇಯಾಂಕ ಪಡೆದಿದ್ದಾರೆ.

ಬಾಂಗ್ಲಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ 136 ರನ್ ಸಿಡಿಸಿದ ಕೊಹ್ಲಿ (928 ಅಂಕಗಳು) ಸ್ಟೀವ್ ಸ್ಮಿತ್ (931 ಅಂಕಗಳು) ಅವರೊಂದಿಗೆ 25 ರಿಂದ ಕೇವಲ ಮೂರು ಅಂಕಗಳ ಅಂತರಕ್ಕೆೆ ತಲುಪಿ ಎರಡನೇ ಸ್ಥಾನದಲ್ಲಿದ್ದಾರೆ. ಇಂದೋರ್ ಟೆಸ್ಟ್; ಪಂದ್ಯದಲ್ಲಿ ವೃತ್ತಿ ಜೀವನದ ಎರಡನೇ ದ್ವಿಶತಕ ಸಿಡಿಸಿದ ಮಯಾಂಕ್ ಅಗರ್ವಾಲ್, 700 ಅಂಕಗಳನ್ನು ತನ್ನ ಖಾತೆಗೆ ಸೇರಿಸಿಕೊಂಡು ಒಂದು ಸ್ಥಾನ ಜಿಗಿದು 10ನೇ ಶ್ರೇಯಾಂಕ ಪಡೆದುಕೊಂಡಿದ್ದಾರೆ. ಇದರೊಂದಿಗೆ ಅಗ್ರ 10ರೊಳಗಿರುವ ಐದನೇ ಬ್ಯಾಟ್ಸ್ ಮನ್ ಎಂಬ ಗೌರವ ಕನ್ನಡಿಗನಿಗೆ ದೊರೆಯಿತು.

ಚೇತೇಶ್ವರ ಪೂಜಾರ (791) ಹಾಗೂ ಅಜಿಂಕ್ಯ ರಹಾನೆ (759) ಅವರು ಕ್ರಮವಾಗಿ ನಾಲ್ಕು ಐದನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 91 ಹಾಗೂ 28 ರನ್ ಗಳಿಸಿದ ಇಂಗ್ಲೆಂಡ್ ತಂಡ ಸ್ಟಾಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಮೂರು ಸ್ಥಾನಗಳು ಜಿಗಿಯುವ ಮೂಲಕ ಮೊಟ್ಟ ಮೊದಲ ಬಾರಿ ಅಗ್ರ 10ರೊಳಗೆ ಪದಾರ್ಪಣೆ ಮಾಡಿದರು. ಪಿಂಕ್ ಟೆಸ್ಟ್ ನಲ್ಲಿ 74 ರನ್ ಗಳಿಸಿದ ಬಾಂಗ್ಲಾದೇಶದ ಮುಷ್ಫಿಕರ್ ರಹೀಮ್ ಅವರು ನಾಲ್ಕು ಸ್ಥಾನಗಳಲ್ಲಿ ಏರಿಕೆ ಕಂಡು 26ನೇ ಶ್ರೇಯಾಂಕ ಪಡೆದರೆ, ನ್ಯೂಜಿಲೆಂಡ್ ನ ಲಿಟನ್ ದಾಸ್ ಎಂಟು ಸ್ಥಾನಗಳನ್ನು ಜಿಗಿದು 78ನೇ ಶ್ರೇಯಾಂಕ ಪಡೆದರು. ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ ವೇಗಿಗಳಾದ ಉಮೇಶ್ ಯಾದವ್ ಹಾಗೂ ಇಶಾಂತ್ ಶರ್ಮಾ ಅವರು ವೃತ್ತಿ ಜೀವನದ ಶ್ರೇಷ್ಠ ಅಂಕಗಳನ್ನು ಗಳಿಸಿದ್ದಾರೆ. ಇಶಾಂತ್ 716 ಅಂಕಗಳೊಂದಿಗೆ 17ನೇ ಸ್ಥಾನ ಹಾಗೂ ಉಮೇಶ್ ಯಾದವ್ 672 ಅಂಕಗಳೊಂದಿಗೆ 21ನೇ ಸ್ಥಾನ ಪಡೆದರು. ಇಶಾಂತ್ ಶರ್ಮಾ 2011ರಲ್ಲಿ ಜುಲೈನಲ್ಲಿ ಏಳನೇ ಸ್ಥಾನ ಪಡೆದಿದ್ದರು.

ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್(772) ಅವರು ಒಂದು ಸ್ಥಾನ ಜಿಗಿದು ಒಂಬತ್ತನೇ ಶ್ರೇಯಾಂಕ ಪಡೆದರು. ಗಾಯಗೊಂಡು ತಂಡದಿಂದ ಹೊರಗಿರುವ ವೇಗಿ ಜಸ್ಪ್ರಿತ್ ಬುಮ್ರಾ(794) ಒಂದು ಸ್ಥಾನ ಇಳಿದು ಐದನೇ ಶ್ರೇಯಾಂಕ ಪಡೆದಿದ್ದಾರೆ. ರವೀಂದ್ರ ಜಡೇಜಾ ಅವರು ಬೌಲಿಂಗ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಜಿಗಿದು 15ನೇ ಶ್ರೇಯಾಂಕ ಪಡೆದುಕೊಂಡಿದ್ದಾರೆ. ಜಡೇಜಾ ಖಾತೆಯಲ್ಲಿ 725 ಅಂಕಗಳಿವೆ. ಆಲ್ ರೌಂಡರ್ ವಿಭಾಗದಲ್ಲಿ ವೆಸ್ಟ್ ಇಂಡೀಸ್ ನ ಜೇಸನ್ ಹೋಲ್ಡರ್ ಬಳಿಕ ಒಂದು ಅಂಕ ಅಂತರದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಆರ್. ಅಶ್ವಿನ್ ಒಂದು ಸ್ಥಾನ ಇಳಿದು ಐದನೇ ಶ್ರೇಯಾಂಕ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT