ಸಂಗ್ರಹ ಚಿತ್ರ 
ಕ್ರಿಕೆಟ್

ಏಕದಿನ, ಟಿ20 ಸರಣಿ: ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ

ಮುಂದಿನ ತಿಂಗಳು ಆರಂಭವಾಗುವ ಭಾರತದ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಗಳಿಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. 

ನವದೆಹಲಿ: ಮುಂದಿನ ತಿಂಗಳು ಆರಂಭವಾಗುವ ಭಾರತದ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಗಳಿಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ.

ಕಿರೋನ್ ಪೋಲಾರ್ಡ್ ವೆಸ್ಟ್ ಇಂಡೀಸ್ ಎರಡೂ ತಂಡಗಳನ್ನು ಮುನ್ನಡೆಸಲಿದ್ದಾರೆ. ಚುಟುಕು ತಂಡದ ಉಪ ನಾಯಕನ ಜವಾಬ್ದಾರಿಯನ್ನು ನಿಕೋಲಸ್ ಪೂರನ್ ನಿರ್ವಹಿಸಲಿದ್ದಾರೆ. ಏಕದಿನ ತಂಡದ ಉಪ ನಾಯಕನಾಗಿ ಶಾಯ್ ಹೋಪ್ ಕಣಕ್ಕೆ ಇಳಿಯಲಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಸರಣಿ ಆಡುತ್ತಿರುವ ಆಟಗಾರರನ್ನೇ ಉಳಿಸಿಕೊಂಡಿದೆ. ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಜರುಗುವ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಪೂರ್ವ ಸಿದ್ಧತೆಯನ್ನು ಭಾರತದ ವಿರುದ್ಧ ಟಿ-20 ಸರಣಿಯಿಂದ ಆರಂಭಿಸಲಿದೆ. ಮೊದಲನೇ ಪಂದ್ಯ ಡಿ.6 ರಂದು ಹೈದರಾಬಾದ್ ನಲ್ಲಿ ನಡೆಯಲಿದೆ.  ನಂತರ ಡಿಸೆಂಬರ್ 8 ರಂದು ತಿರುವನಂತಪುರಂನಲ್ಲಿ ಎರಡನೇ ಟಿ 20 ಮತ್ತು ಮೂರನೇ ಪಂದ್ಯ ಡಿಸೆಂಬರ್ 11 ರಂದು ಮುಂಬೈನಲ್ಲಿ ನಡೆಯಲಿದೆ.

ಆ ಬಳಿಕ ಉಭಯ ತಂಡಗಳು ಚೆನ್ನೈ (ಡಿಸೆಂಬರ್ 15), ವೈಜಾಗ್ (ಡಿಸೆಂಬರ್ 18) ಮತ್ತು ಕಟಕ್ (ಡಿಸೆಂಬರ್ 22) ನಲ್ಲಿ ಮೂರು ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!