ಸಂಗ್ರಹ ಚಿತ್ರ 
ಕ್ರಿಕೆಟ್

ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಗೆ ತಂಡ ಪ್ರಕಟ: ಸಾಹಾ, ಆರ್ ಅಶ್ವಿನ್ ಗೆ ಸ್ಥಾನ, ರಿಷಬ್ ಪಂತ್ ಗೆ ವಿಶ್ರಾಂತಿ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಟಗಾರರನ್ನು ಪ್ರಕಟಿಸಲಾಗಿದ್ದು, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಗೆ ಮೊದಲ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನಕ್ಕೆ ವೃದ್ಧಿಮಾನ್ ಸಾಹಾ ಆಯ್ಕೆಯಾಗಿದ್ದು, ಕೇರಂ ಸ್ಪೆಷಲಿಸ್ಟ್ ಆರ್ ಅಶ್ವಿನ್ ತಂಡಕ್ಕೆ ವಾಪಸ್ ಆಗಿದ್ದಾರೆ.

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಟಗಾರರನ್ನು ಪ್ರಕಟಿಸಲಾಗಿದ್ದು, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಗೆ ಮೊದಲ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನಕ್ಕೆ ವೃದ್ಧಿಮಾನ್ ಸಾಹಾ ಆಯ್ಕೆಯಾಗಿದ್ದು, ಕೇರಂ ಸ್ಪೆಷಲಿಸ್ಟ್ ಆರ್ ಅಶ್ವಿನ್ ತಂಡಕ್ಕೆ ವಾಪಸ್ ಆಗಿದ್ದಾರೆ.

ಮೊದಲ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟಿಸಿರುವ ಬಿಸಿಸಿಐ ಈ ಕುರಿತಂತೆ ಟ್ವೀಟ್ ಮಾಡಿದ್ದು, ಬಹು ದಿನಗಳ ಬಳಿಕ ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾರ ಸ್ಪಿನ್ ಜುಗಲ್ ಬಂದಿ ಒಂದಾಗಿದೆ. ಇನ್ನು ದೇಶೀ ಟೂರ್ನಿಯ ನಿರಾಶಾದಾಯಕ ಪ್ರದರ್ಶನದ ಹೊರತಾಗಿಯೂ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ತಂಡಕ್ಕೆ ಆಯ್ಕೆಯಾಗಿದ್ದು, ಅವರೊಂದಿಗೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರಾ ತಂಡಕ್ಕೆ ವಾಪಸ್ ಆಗಿದ್ದಾರೆ.

ಇನ್ನು ಧೋನಿ ಉತ್ತರಾಧಿಕಾರಿ ಎಂದು ಕರೆಯಲಾಗುತ್ತಿದ್ದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ರನ್ನು ಮೊದಲ ಟೆಸ್ಟ್ ಪಂದ್ಯದಿಂದ ಕೈ ಬಿಡಲಾಗಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಪಂತ್ ನಿರಾಶಾದಾಯಕ ಪ್ರದರ್ಶನವೇ ಆಯ್ಕೆ ಸಮಿತಿಯ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.

ತಂಡ ಇಂತಿದೆ
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮವಿಹಾರಿ, ಆರ್ ಅಶ್ವಿನ್, ಆರ್ ಜಡೇಜಾ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಇಶಾಂತ್ ಶರ್ಮಾ, ಮೊಹಮದ್ ಶಮಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ