ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಡಾ.ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ತಂಡದ ಪರ ರೋಹಿತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆರಂಭಿಸಿದ್ದು, ಭಾರತ ತಂಡ ವಿಕೆಟ್ ನಷ್ಟವಿಲ್ಲದೇ 14 ಓವರ್ ನಲ್ಲಿ 35 ರನ್ ಗಳಿಸಿದೆ. 46 ಎಸೆತಗಳನ್ನು ಎದುರಿಸಿರುವ ಮಯಾಂಕ್ 19 ರನ್ ಗಳಿಸಿದ್ದರೆ, 39 ಎಸೆತೆಗಳನ್ನು ಎದುರಿಸಿರುವ ರೋಹಿತ್ ಶರ್ಮಾ 17 ರನ್ ಗಳಿಸಿದ್ದಾರೆ.
ಇನ್ನು ಈ ಪಂದ್ಯದ ಮೂಲಕ ವೃದ್ಧಿಮಾನ್ ಸಾಹಾ ಅಂತಾರಾಷ್ಟ್ರೀಯ ತಂಡ ಸೇರಿಕೊಂಡಿದ್ದು, ಇವರೊಂದಿಗೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಮತ್ತು ಆರ್ ಅಶ್ವಿನ್ ಕೂಡ ತಂಡ ಸೇರಿಕೊಂಡಿದ್ದಾರೆ.