ಕ್ರಿಕೆಟ್

ಕಿಂಗ್ಸ್ ಇಲೆವೆನ್ ಪಂಜಾಬ್ ಮುಖ್ಯ ಕೋಚ್ ಅನಿಲ್ ಕುಂಬ್ಳೆ

Nagaraja AB

ಮುಂಬೈ : ನಾಯಕ ವಿರಾಟ್ ಕೊಹ್ಲಿ ಜತೆ ಭಿನ್ನಾಭಿಪ್ರಾಯದಿಂದ ಟೀಮ್ ಇಂಡಿಯಾ ಮುಖ್ಯ ಕೋಚ್ ಸ್ಥಾನದಿಂದ ಕೆಳಗೆ ಇಳಿದಿದ್ದ ಅನಿಲ್ ಕುಂಬ್ಳೆ ಮತ್ತೆ ತರಬೇತಿ ವಿಭಾಗಕ್ಕೆ ಮರಳಲು ಸಜ್ಜಾಗುತ್ತಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ  ನಿರ್ದೇಶಕರಾಗಿ ಭಾರತದ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಅವರನ್ನು ಅಂತಿಮಗೊಳಿಸಲಾಗಿದೆ. 

 ಭಾರತ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರು ಕಿಂಗ್ಸ್ ಇಲೆವೆನ್ ಪಂಜಾಬ್‍ಗೆ ಕೋಚ್ ಆಗಿ ಸೇವೆ ಸಲ್ಲಿಸುವುದು ನಮ್ಮ ಮೊದಲ ಆಧ್ಯತೆ. ಅವರ ಕ್ರಿಕೆಟ್ ಜ್ಞಾನ ಹಾಗೂ ತರಬೇತಿಯ ಸಾಮಥ್ರ್ಯ ಇಡೀ ಜಗತ್ತಿಗೆ ತಿಳಿದಿದೆ. ಅವರು ಶಾಂತ ಸ್ವಭಾವದ ವ್ಯಕ್ತಿ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ಫ್ರಾಂಚೈಸಿಯ ಸಹ ಮಾಲೀಕ ನೆಸ್ ವಾಡಿಯಾ ತಿಳಿಸಿದ್ದಾರೆ.  

ಐಪಿಎಲ್‍ನಲ್ಲೂ ಕುಂಬ್ಳೆಗೆ ಸಾಕಷ್ಟು ಅನುಭವವಿದೆ. ಭಾರತ ತಂಡದ ಜತೆ ಈ ಹಿಂದೆ ಇನ್ನಿತರ ಎರಡು ಫ್ರಾಂಚೈಸಿಗಳೊಂದಿಗೆ ಅವರು ಸೇವೆ ಸಲ್ಲಿಸಿದ್ದಾರೆ. ಕುಂಬ್ಳೆ ನೇತೃತ್ವದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಉತ್ತಮ ಪ್ರದರ್ಶನ ತೋರಲಿದೆ ಎಂಬ ನಂಬಿಕೆ ಇದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

SCROLL FOR NEXT