ಕ್ರಿಕೆಟ್

2ನೇ ಟೆಸ್ಟ್: ಆಫ್ರಿಕನ್‌ರನ್ನು ಮಣಿಸಿ ಗೆಲುವಿನ ನಗೆ ಬೀರಿದ ಟೀಂ ಇಂಡಿಯಾ

Vishwanath S

ಪುಣೆ: ಟೀಂ ಇಂಡಿಯಾ ವೇಗಿಗಳ ಮಾರಕ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಗಳ ತತ್ತರಿಸಿದ್ದು ಎರಡನೇ ಟೆಸ್ಟ್ ಪಂದ್ಯದಲ್ಲೂ ಭಾರತ ಗೆಲುವಿನ ನಗೆ ಬೀರಿದೆ. 

ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 137 ರನ್ ಗಳಿಂದ ಗೆಲುವಿನ ನಗೆ ಬೀರಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 601 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 275 ರನ್ ಗಳಿಗೆ ಆಲೌಟ್ ಆಗಿ ಫಾಲೋ ಆನ್ ಗೆ ಸಿಲುಕಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಫ್ರಿಕಾ 189 ರನ್ ಗಳಿಗೆ ಆಲೌಟ್ ಆಗಿ ಭಾರತಕ್ಕೆ ಶರಣಾಗಿದೆ. 

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಫಾಲೋ ಆನ್‍ಗೆ ಸಿಲುಕಿ ದ್ವಿತೀಯ ಇನಿಂಗ್ಸ್ ಆರಂಭಸಿದ ದಕ್ಷಿಣ ಆಫ್ರಿಕಾ ತಂಡ 67.2 ಓವರ್ ಗಳಲ್ಲಿ 189 ರನ್ ಗಳಿಸಿ ಸರ್ವ ಪತನವಾಯಿತು. ಇದರೊಂದಿಗೆ ತವರು ನೆಲದಲ್ಲಿ ಭಾರತ ತಂಡ ಸತತ 11 ಸರಣಿ ಗೆದ್ದು ವಿಶೇಷ ಸಾಧನೆ ಮಾಡಿತು. ತವರು ಮಣ್ಣಿನಲ್ಲಿ ಅತಿ ಹೆಚ್ಚು ಟೆಸ್ಟ್ ಸರಣಿ ಗೆದ್ದ ವಿಶ್ವದ ಮೊದಲ ತಂಡ ಎಂಬ ಇತಿಹಾಸವನ್ನು ಕೊಹ್ಲಿ ಪಡೆ ಮಾಡುವ ಮೂಲಕ ಆಸ್ಟ್ರೇಲಿಯಾ(10 ಸರಣಿ) ದಾಖಲೆಯನ್ನು ಮುರಿಯಿತು.

SCROLL FOR NEXT