ಟೀಂ-ಇಂಡಿಯಾ-ಧೋನಿ-ರವಿಶಾಸ್ತ್ರಿ 
ಕ್ರಿಕೆಟ್

ರಾಂಚಿಯಲ್ಲಿ ಎಂಎಸ್ ಧೋನಿಗೆ ಟೀಂ ಇಂಡಿಯಾದಿಂದ ಗೆಲುವಿನ ಉಡುಗೊರೆ, ಅದು ಏನು ಅಂತೀರಾ?

ಇಲ್ಲಿನ ಜೆಎಸ್‍ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಕೊಹ್ಲಿ ಪಡೆ ಡ್ರೆಸ್ಸಿಂಗ್ ಕೊಠಡಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡರು.

ರಾಂಚಿ: ಇಲ್ಲಿನ ಜೆಎಸ್‍ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಕೊಹ್ಲಿ ಪಡೆ ಡ್ರೆಸ್ಸಿಂಗ್ ಕೊಠಡಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡರು.

ಚೊಚ್ಚಲ ಟೆಸ್ಟ್ ಪಂದ್ಯವಾಡಿದ ಜಾರ್ಖಂಡ್ ರಾಜ್ಯದ ಶಹಬಾಜ್ ನದೀಮ್ ಅವರ ಬಳಿ ಕೆಲಕಾಲ ಮಾತನಾಡಿದ ಧೋನಿ, ಉಪಯುಕ್ತ ಸಲಹೆಗಳನ್ನು ನೀಡಿದರು.

ನಾಲ್ಕನೇ ದಿನ ಭಾರತ ಕೇವಲ 10 ನಿಮಿಷಗಳಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಆಲೌಟ್ ಮಾಡಿತು. ಆ ಮೂಲಕ ಇನಿಂಗ್ಸ್ ಹಾಗೂ 202 ರನ್‍ಗಳ ಜಯ ದಾಖಲಿಸಿ 3-0 ಅಂತರದಲ್ಲಿ ಟೆಸ್ಟ್ ಸರಣಿ ತನ್ನದಾಗಿಸಿಕೊಂಡಿತು.

ಟೀಮ್ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಧೋನಿ ಅವರೊಂದಿಗಿನ ಫೋಟೊವನ್ನು ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದ್ಭುತ ಟೆಸ್ಟ್ ಸರಣಿ ಜಯದ ಬಳಿಕ ಭಾರತೀಯ ನಿಜವಾದ ದಂತಕತೆ ನೋಡಿದ್ದಕ್ಕೆ ತುಂಬಾ ಸಂತಸವಾಯಿತು ಎಂದು ಶೀರ್ಷಿಕೆ ನೀಡಿದ್ದಾರೆ.

ಮಹೇಂದ್ರ ಸಿಂಗ್ ಧೋನಿ 2014ರಲ್ಲಿಯೇ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು. ಜುಲೈ 14 ರಂದು ಮುಕ್ತಾಯವಾಗಿದ್ದ ಐಸಿಸಿ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ದಿಂದ ದೂರ ಉಳಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT