ಯುವರಾಜ್ ಸಿಂಗ್ 
ಕ್ರಿಕೆಟ್

ಬಿಸಿಸಿಐ ವಿರುದ್ಧ ಕಿಡಿಕಾರಿದ ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್

ವಿಜಯ್  ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡ ಸೋಲು ಅನುಭವಿಸಿದ ಬಳಿಕ ಭಾರತ ತಂಡದ ಮಾಜಿ  ಸ್ಟಾರ್ ಆಲ್ ರೌಂಡರ್ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಿರುದ್ಧ ಕಿಡಿಕಾರಿದ್ದಾರೆ.

ನವದೆಹಲಿ: ವಿಜಯ್  ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡ ಸೋಲು ಅನುಭವಿಸಿದ ಬಳಿಕ ಭಾರತ ತಂಡದ ಮಾಜಿ  ಸ್ಟಾರ್ ಆಲ್ ರೌಂಡರ್ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಿರುದ್ಧ ಕಿಡಿಕಾರಿದ್ದಾರೆ.
 
ಸೋಮವಾರ ಅಂತಿಮ ಎಂಟರ ಘಟ್ಟದ ಪಂದ್ಯದಲ್ಲಿ ಸೋತು ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು ತಂಡ 174 ರನ್ ದಾಖಲಿಸಿತ್ತು. ಬಳಿಕ. 175 ರನ್ ಗುರಿ ಬೆನ್ನತ್ತಿದ ಪಂಜಾಬ್ ತಂಡ 12.2 ಓವರ್ ಗಳಿಗೆ ಎರಡು ವಿಕೆಟ್ ಕಳೆದುಕೊಂಡು 52 ರನ್ ಗಳಿಸಿತ್ತು. ಈ ವೇಳೆ ಬಂದ ಕಾರಣ ಪಂದ್ಯವನ್ನು ರದ್ದು ಮಾಡಲಾಯಿತು.

ಲೀಗ್ ಹಂತದಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಆಧಾರದ ಮೇಲೆ ತಮಿಳುನಾಡಿಗೆ ಸೆಮಿಫೈನಲ್ ಗೆ ಅರ್ಹತೆ ಪಡೆಯಿತು. ಈ ಬಗ್ಗೆ ಟ್ವಿಟರ್ ನಲ್ಲಿ ಕಿಡಕಾರಿರುವ ಯುವರಾಜ್ ಸಿಂಗ್, ವಿಜಯ್ ಹಜಾರೆ ಟ್ರೋಫಿಯ ಮತ್ತೊಂದು  ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಪಂಜಾಬ್ಗೆ ಅನಿರೀಕ್ಷಿತ ಫಲಿತಾಂಶ ಸಿಕ್ಕಿದೆ. ಮಳೆಯಿಂದ ಪಂದ್ಯ ರದ್ದುಗೊಳಿಸಿ ಪಂಜಾಬ್ ಸೆಮಿಫೈನಲ್ ಬಾಗಿಲು ಬಂದ್ ಮಾಡಲಾಗಿದೆ. ಮೀಸಲು ದಿನ ಏಕೆ ನಿಗದಿಮಾಡಬಾರದು? ದೇಶೀಯ ಕ್ರಿಕೆಟ್ ಎಂದರೆ ಬಿಸಿಸಿಐಗೆ ದೊಡ್ಡ ವಿಷಯವಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಲೈಟ್ ಎ ಮತ್ತು ಬಿ ಗುಂಪಿನಲ್ಲಿ ಗೆಲುವು ಪಡೆದು ನಾಕೌಟ್ ಗೆ ಅರ್ಹತೆ ಪಡೆಯುವುದು ಕಷ್ಟದ ಕೆಲಸ. ಅಂಥದರಲ್ಲಿ ಪಂಜಾಬ್ ಕಠಿಣ ಹೋರಾಟದೊಂದಿಗೆ ನಾಕೌಟ್ ಹಂತಕ್ಕೆ  ಲಗ್ಗೆ ಇಟ್ಟಿದೆ. ಆದರೆ,  ಮಳೆಯಿಂದಾಗಿ ಪಂದ್ಯ ಸಂಪೂರ್ಣವಾಗಿ ಆಡದೆ ಟೂರ್ನಿಯಿಂದ ಹೊರ ನಡೆದಿದೆ ಎಂದು ಪಂಜಾಬ್ ತಂಡದ ಮಂದೀಪ್ ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ