ಸಂಗ್ರಹ ಚಿತ್ರ 
ಕ್ರಿಕೆಟ್

ಬಿಳಿ ಜೆರ್ಸಿ ತೊಡುವ ಆಸೆ ಕೈಗೂಡಿದೆ: ಜಸ್ ಪ್ರೀತ್ ಬುಮ್ರಾ

ಬಿಳಿ ಜೆರ್ಸಿ ತೊಡುವ ತಮ್ಮ ಬಹುದಿನಗಳ ಕನಸು ನನಸಾಗಿದೆ ಎಂದು ಭಾರತದ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬುಮ್ರಾ ತಿಳಿಸಿದ್ದಾರೆ. 

ಮುಂಬೈ: ಬಿಳಿ ಜೆರ್ಸಿ ತೊಡುವ ತಮ್ಮ ಬಹುದಿನಗಳ ಕನಸು ನನಸಾಗಿದೆ ಎಂದು ಭಾರತದ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬುಮ್ರಾ ತಿಳಿಸಿದ್ದಾರೆ. 

ಅಭಿಮಾನಿಗಳ ಬೆಂಬಲ ಹಾಗೂ ಸತತ ಪ್ರಯತ್ನದ ಫಲದಿಂದ ಕ್ರಿಕೆಟ್ ನ ಮೂರು ಮಾದರಿಯಲ್ಲಿ ಆಡುತ್ತಿರುವುದಾಗಿ ಬುಮ್ರಾ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. 

ಕ್ರಿಕೆಟ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬುಮ್ರಾ, ಹಂತ ಹಂತವಾಗಿ ಆಟದಲ್ಲಿ ಪಕ್ವತೆ ಸಿಗುತ್ತಿದೆ ಎಂದಿದ್ದಾರೆ. ಮೈದಾನದಲ್ಲಿ ತಾವು ಶಾಂತರಾಗಿ ಕಾಣುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಕೆಲವೊಮ್ಮೆ ಮೈದಾನದಲ್ಲಿ ಸಿಟ್ಟು ಬರುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.  ವಿಶ್ವಕಪ್ ನಲ್ಲಿ ಆಡುವುದು ಹೆಮ್ಮೆಯ ಸಂಗತಿ. ಈ ಪಂದ್ಯಗಳಲ್ಲಿ ಒತ್ತಡ ಹೆಚ್ಚಿರುತ್ತದೆ. ಆದರೆ, ಆತ್ಮಸ್ಥೈರ್ಯ ಮಹತ್ವದಾಗಿರುತ್ತದೆ ಎಂದಿದ್ದಾರೆ.

ಇದೇ ವೇಳೆ ತಮ್ಮ ವೃತ್ತಿ ಜೀವನದ ಮರೆಯಲಾರದ ಕ್ಷಣದ ಕುರಿತು ಮಾತನಾಡಿದ ಬುಮ್ರಾ 2018ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದಿದ್ದೆ. ಇದು ನನ್ನ ವೃತ್ತಿ ಜೀವನದ ಮರೆಯಲಾರದ ಕ್ಷಣವಾಗಿದೆ ಎಂದು ಹೇಳಿದರು.

ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಮಾಡಿದ ಕೇವಲ 12 ಪಂದ್ಯಗಳಲ್ಲಿ ಬುಮ್ರಾ 62 ವಿಕೆಟ್ ಗಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!